More

    ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ ಮೂಡಲಿ

    ಕೂಡ್ಲಿಗಿ: ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಸುಧಾರಣೆಗೆ ಒತ್ತು ನೀಡಲಾಗುತ್ತಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಪ್ರೌಢಶಾಲೆಯಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ವಿಧ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣಾ ಉದ್ದೇಶದಿಂದ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಬೌದ್ಧಿಕ ಮಟ್ಟ ಸುಧಾರಣೆಗೆ ಒತ್ತು

    ಪ್ರಸಕ್ತ ಸಾಲಿನ ಹತ್ತನೆ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯದ ವಿಷಯಗಳ ಕುರಿತು ಆಯ್ದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆಯಾ ವಿಷಯದ ಕುರಿತು ಅಭ್ಯಾಸ ಮಾಡಲು ಪ್ರೇರೇಪಿಸಿದಂತಾಗುತ್ತದೆ. ವಿಷಯಗಳ ಕುರಿತು ಮನನ ಮಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಉತ್ತೇಜಿಸಿದಂತಾಗುತ್ತದೆ ಎಂದು ತಿಳಿಸಿದರು.

    ಇದನ್ನೂ ಓದಿ: ಅಕ್ರಮ ಮದ್ಯ ವಶ

    ಪ್ರತಿ ಶುಕ್ರವಾರ ವಿದ್ಯಾರ್ಥಿಗಳಿಗೆ ಗುಂಪುಗಳನ್ನಾಗಿ ವಿಗಂಡಿಸಲಾಗುವುದು. ತರಗತಿ ವಿಷಯಗಳನ್ನ ಮೊದಲೇ ತಿಳಿಸಿ ನಂತರ ಪ್ರಶ್ನೆಗಳನ್ನು ಕೇಳಲಾಗುವುದು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಮೂಡಿಲಿದೆ. ಗುಂಪುಗಳಲ್ಲಿ ಪ್ರಶ್ನೆ ಕುರಿತು ಚರ್ಚಿಸಿ, ಉತ್ತರವನ್ನು ಸಹ ನೀಡಿದರೆ ನೆನಪಿನ ಶಕ್ತಿಯಲ್ಲಿ ಉಳಿಯಲಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಈ ರಸಪ್ರಶ್ನೆ ಕಾರ್ಯಕ್ರಮ ಸಹಕಾರಿಯಾಗುವುದಲ್ಲದೆ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯ ಎಂದರು.

    ಶಿಕ್ಷಕ ಕೆಪಿಎಂ ಶಿವಸ್ವಾಮಿ ವಿಧ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಮುಖ್ಯಶಿಕ್ಷಕ ಟಿ.ಬಸವರಾಜ, ಶಿಕ್ಷಕರಾದ ಕೆಪಿಎಂ ಶಿವಸ್ವಾಮಿ, ರುದ್ರಪ್ಪ,ಉಡುಚಪ್ಪ, ಭಾಸ್ಕರ ನಾಯ್ಕ, ಗೀತಾ, ರೋಜರಾಣಿ, ರಾಜೇಶ್ವರಿ, ಸುನೀತಾ, ಗಜಾಪುರ ಹನುಮಂತಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts