More

    ನಾಡಿನ ಸಾಹಿತ್ಯ, ಸಂಸ್ಕೃತಿ ಅತ್ಯಂತ ಭಿನ್ನ

    ಕೂಡ್ಲಿಗಿ: ಕರ್ನಾಟಕ ನಾಮಕರಣಗೊಂಡು 50 ವರ್ಷದ ಸವಿನೆನಪಿಗಾಗಿ ಸರ್ಕಾರ ಭುವನೇಶ್ವರಿ ತಾಯಿಯ ಜ್ಯೋತಿ ರಥಯಾತ್ರೆ ಮೂಲಕ ನಾಡಿನ ಹಿರಿಮೆಯನ್ನು ಪ್ರತಿ ಹಳ್ಳಿಗೂ ತಲುಪಿಸುವ ಮಹತ್ವದ ಕಾರ್ಯ ಕೈಗೊಂಡಿದೆ ಎಂದು ತಹಸೀಲ್ದಾರ್ ಎಂ.ರೇಣುಕಾ ಹೇಳಿದರು.

    ಕೊಟ್ಟೂರು ತಾಲೂಕಿನಿಂದ ಭಾನುವಾರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ 50ರ ಸಂಭ್ರಮ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ ಕೋರಿ ಮಾತನಾಡಿದರು.

    ಕನ್ನಡ ಭಾಷೆಗೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ ಇತರ ರಾಜ್ಯಗಳಿಗಿಂತ ಅತ್ಯಂತ ವಿಭಿನ್ನವಾಗಿದೆ. ಇಲ್ಲಿನ ನೆಲ, ಜಲ, ಭಾಷೆ ಅತ್ಯಂತ ಶ್ರೀಮಂತವಾಗಿದ್ದು, ಆದಿಕವಿ ಪಂಪ, ರನ್ನ, ಜನ್ನನಿಂದ ರಾಷ್ಟ್ರಕವಿ ಕುವೆಂಪುವರೆಗೂ ಸಾಹಿತ್ಯಲೋಕದಲ್ಲಿ ಅತ್ಯಂತ ಉತ್ಕೃಷ್ಟವಾಗಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ದೊರಕಿರವುದು ನಾಡಿನ ಹೆಮ್ಮೆಯ ಸಂಗತಿ ಎಂದರು.

    ತಾಪಂ ಇಒ ವೈ.ರವಿಕುಮಾರ್ ಮಾತನಾಡಿ, ಕನ್ನಡ ಸಾರಸ್ವತ ಲೋಕದ ಶ್ರೀಮಂತಿಕೆ ಹೆಚ್ಚಿಸುವಲ್ಲಿ ಸಾಧು-ಸಂತರು, ವಚನಕಾರರು, ದಾಸಶ್ರೇಷ್ಠರು ಮತ್ತು ಮಠ-ಮಾನ್ಯಗಳ ಕೊಡುಗೆಯೂ ಅಪಾರವಾಗಿದೆ. ಕನ್ನಡ ಕೇವಲ ಭಾಷೆಯಾಗಿರದೆ ಸಂಸ್ಕೃತಿ, ಶ್ರೇಷ್ಠತೆಗಳ ಸಂಗಮವಾಗಿದೆ. ಮಾಹಿತಿ- ತಂತ್ರಜ್ಞಾನದ ಯುಗದಲ್ಲಿ ಹೊಸ ಸಾಧ್ಯತೆಗಳತ್ತಲೂ ಗಮನಹರಿಸಿ ಕನ್ನಡದ ಅಂತಃಸತ್ವವನ್ನು ಹೆಚ್ಚಿಸುವ ಸಂಕಲ್ಪ ನಮ್ಮೆಲ್ಲರದ್ದಾಗಬೇಕು ಎಂದರು.

    ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಿತು. ನೂರಾರು ವಿದ್ಯಾರ್ಥಿಗಳು ಹಾಗೂ ವಾದ್ಯ, ಮೇಳಗಳೊಂದಿಗೆ ಕಲಾವಿದರು ಪಾಲ್ಗೊಂಡು ಮೆರವಣಿಗೆಯ ಮೆರುಗು ಹೆಚ್ಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts