ಹೊಸಪೇಟೆ: ಕೂಡ್ಲಿಗಿ ಶಿಶು ಅಭಿವೃದ್ಧಿ ಯೋಜನೆಯಡಿ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕಿನ ವ್ಯಾಪ್ತಿಯ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 56 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.12 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ವೆಬ್‌ಸೈಟ್ https://karnemakaone.kar.nic/abcd/ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೂಡ್ಲಿಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.