More

    ಕ್ಷೇತ್ರದ ಪ್ರತಿ ಮನೆಗೂ ನೀರು ಸರಬರಾಜು

    ಕೂಡ್ಲಿಗಿ: ಜಲ ಜೀವನ್ ಯೋಜನೆಯಡಿ ಕ್ಷೇತ್ರದ ಪ್ರತಿ ಮನೆಗೂ ನೀರು ಸರಬರಾಜು ಮಾಡಲಾಗುವುದು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

    ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ಮೊದಲ ಹಂತದ ಜಲ ಜೀವನ್ ಯೋಜನೆಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು. 8.55 ಕೋಟಿ ರೂ. ವೆಚ್ಚದಲ್ಲಿ ಕ್ಷೇತ್ರ 12 ಗ್ರಾಮಗಳ 2,608 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಲಾಗುವುದು. ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕೆರೆಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

    ಕ್ಷೇತ್ರದಲ್ಲಿ ಬಹುತೇಕ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಿಂದ ತಾಲೂಕು ಕೇಂದ್ರ ಹಾಗೂ ಅಕ್ಕ ಪಕ್ಕದ ಪಟ್ಟಣಗಳಿಗೆ ಹೋಗಿ ಬರಲು ಅನುಕೂಲವಾಗಿದೆ. ಅನೇಕ ಕಡೆ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಪ್ರತ್ಯೇಕ 6 ಕೊಠಡಿ ನಿರ್ಮಿಸಿ ಉದ್ಘಾಟಿಸಲಾಗಿದೆ ಎಂದರು.

    ಇದಕ್ಕೂ ಮೊದಲು ರಾಮದುರ್ಗದಿಂದ ದುರುಗಮ್ಮ ದೇವಸ್ಥಾನದವರೆಗೆ ಹಾಗೂ ಕೂಡ್ಲಿಗಿಯಿಂದ ಕಕ್ಕುಪ್ಪಿ ವರೆಗೆ 4 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ 2ರ ಅಭಿವೃದ್ಧಿಗೆ ಮತ್ತು 2 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 50ರಿಂದ ಅಡವಿಸೂರವ್ವನಹಳ್ಳಿ ರಸ್ತೆ ಅಭಿವೃದ್ಧಿ ಶಾಸಕರು ಚಾಲನೆ ನೀಡಿದರು. ನಂತರ ಪಟ್ಟಣದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ಉದ್ಘಾಟಿಸಿದರು.

    ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗುಂಡುಮುಣುಗು ಕೆ. ತಿಪ್ಪೇಸ್ವಾಮಿ, ಎಸ್.ಪಿ.ಪ್ರಕಾಶ್, ಕೆ.ಎಂ. ತಿಪ್ಪೇಸ್ವಾಮಿ, ಪಪಂ ಸದಸ್ಯ ಪಿ. ಚಂದ್ರು, ಮುಖಂಡರಾದ ಸೂರ್ಯಪಾಪಣ್ಣ, ಬಿ. ಭೀಮೇಶ್, ಎಚ್. ರೇವಣ್ಣ, ಚಂದ್ರಮೌಳಿ, ಪಾಪನಾಯಕ, ಮಂಜುನಾಥ ನಾಯಕ, ಎಂ.ಶಿವಣ್ಣ, ಕಾಮಶೆಟ್ಟಿ ನಾಗರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts