More

    ಮಾಸಿಕ ಸಂತೆಯಿಂದ ಆರ್ಥಿಕ ಸಾವಲಂಬನೆ

    ಕೂಡ್ಲಿಗಿ: ಮಾಸಿಕ ಸಂತೆಯು ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿ ಮಾಡಲಿದೆ ಎಂದು ಗ್ರಾಪಂ ಅಧ್ಯಕ್ಷ ಎನ್.ಕೃಷ್ಣ ಹೇಳಿದರು.
    ತಾಲೂಕಿನ ಗುಡೇಕೋಟೆಯಲ್ಲಿ ಗ್ರಾಪಂ ಹಾಗೂ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಏರ್ಪಡಿಸಿದ್ದ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ತಯಾರಿಸಿದ ವಿವಿಧ ಕರ ಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಸಂತೆ ಅನುಕೂಲವಾಗಲಿದೆ ಎಂದರು.

    ಮಹಿಳೆಯರು ಸ್ವಯಂ ಉದ್ಯೋಗದೊಂದಿಗೆ ಬದುಕು ರೂಪಿಸಿಕೊಳ್ಳಲಿ

    ಗ್ರಾಪಂ ಸದಸ್ಯ ಎಸ್.ಬೊಮ್ಮಣ್ಣ ಮಾತನಾಡಿ, ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಹಿಳೆಯರು ಸ್ವಯಂ ಉದ್ಯೋಗದೊಂದಿಗೆ ಬದುಕು ರೂಪಿಸಿಕೊಳ್ಳಬೇಕು ಎಂದರು. ಸ್ವ ಸಹಾಯ ಗುಂಪಿನ ಮಹಿಳೆಯರು ಸ್ಥಳೀಯವಾಗಿ ತಯಾರಿಸಿದ ವಸ್ತುಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು. ಎನ್‌ಆರ್‌ಎಲ್‌ಎಂ ವಲಯ ಮೇಲ್ವಿಚಾರಕ ವೆಂಕನಾಯ್ಕ, ಗ್ರಾಪಂ ಸದಸ್ಯೆ ಸುನೀತಾ, ಕಾರ್ಯದರ್ಶಿ ರಾಮಚಂದ್ರಪ್ಪ, ಬಿಲ್ ಕಲೆಕ್ಟರ್ ಎರ‌್ರಿಸ್ವಾಮಿ ಆಚಾರಿ, ಮುಖಂಡ ಪೇಂಟ್ ತಿಪ್ಪೇಸ್ವಾಮಿ ಇನ್ನಿತರರಿದ್ದರು.

    ಇದನ್ನೂ ಓದಿ: ಮಕರ ಸಂಕ್ರಾಂತಿ 2024: ಸಂಕ್ರಾಂತಿಯಂದು ಈ 6 ವಸ್ತುಗಳನ್ನು ದಾನ ಮಾಡಿ, ಅಪಾರ ಸಂಪತ್ತಿನ ಒಡೆಯರಾಗುತ್ತೀರಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts