More

    ನಿರಂತರ ಪರಿಶ್ರಮದಿಂದ ಯಶಸ್ಸು-ಹಿರೇಮಠದ ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

    ಕೂಡ್ಲಿಗಿ: ಪ್ರತಿಭೆ ಯಾರ ಸೊತ್ತು ಅಲ್ಲ. ಅದಕ್ಕೆ ವಯಸ್ಸಿನ ಮಿತಿ ಇಲ್ಲ. ನಿರಂತರ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ ಎಂದು ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿ ಹೇಳಿದರು. ಪಟ್ಟಣದ ಜ್ಞಾನಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸುವಿದ್ಯಾ ಸಾಂಸ್ಕೃತಿಕ ಸೌರಭ, ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತಾನಾಡಿದರು.

    ಇಂದಿನ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಇಲ್ಲದಿರುವುದು ದುರಂತ.ಮೊಬೈಲ್ ಎನ್ನುವ ಮಾಯಾಜಾಲದಿಂದ ಮಕ್ಕಳು ಹೊರ ಬಂದು ಸಾಹಿತ್ಯ ಪ್ರೇಮಿಗಳಾಗಬೇಕು. ಕನ್ನಡ ಸಾರಸ್ವತ ಲೋಕದಲ್ಲಿ ಸಾಹಿತ್ಯದ ಸಂಪತ್ತು ಹೇರಳವಾಗಿದ್ದು, ಅದರ ಸಾರವನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದರು.

    ಜ್ಞಾನಭಾರತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ ಮಾತಾನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಮೌಲ್ಯಯುತ ಶಿಕ್ಷಣದ ಅವಶ್ಯಕತೆ ಇದೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ಬಾಲ್ಯಾವ್ಯಸ್ಥೆಯಲ್ಲಿಯೇ ದುಶ್ಚಟಗಳಿಗೆ ದಾಸರಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಮಕ್ಕಳಿಗೆ ಅವಶ್ಯಕತೆಗಿಂತ ಹೆಚ್ಚಿನ ಸೌಲಭ್ಯಗಳನ್ನು ನೀಡದೇ ಹಣದ ಮಹತ್ವದ ಪರಿಪಾಠವನ್ನು ತಿಳಸಬೇಕಿದೆ ಎಂದರು.

    ವಿದ್ಯಾರ್ಥಿಗಳ ವಿಜ್ಞಾನ ಹಾಗೂ ಕಲಾ ವಸ್ತು ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಪಿಎಸ್‌ಐ ಧನಂಜಯ, ಕಸಾಪ ಅಧ್ಯಕ್ಷ ವೀರೇಶ್ ಅಂಗಡಿ, ಕಜಾಪ ಅಧ್ಯಕ್ಷ ಕೆ.ಎಂ.ವೀರೇಶ್, ರಂಗಭೂಮಿ ಕಲಾವಿದೆ ಪಿ.ಪದ್ಮಾ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಮಯೂರ ಮಂಜು ಮಾತಾನಾಡಿದರು. ವಿಜ್ಞಾನ ವಿಭಾಗದ ಪ್ರಾಚಾರ್ಯ ಕರಿವೀರನ ಗೌಡ, ಮುಖ್ಯ ಶಿಕ್ಷಕಿ ಮಲೈಕಾ ಬಾನು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts