More

    ಎಲ್ಲರೂ ಸದೃಢ ದೇಹ ಹೊಂದಲಿ

    ಕೂಡ್ಲಿಗಿ: ಸೋಲು-ಗೆಲುವು ಸಮನಾಗಿ ಸ್ವೀಕರಿಸಬೇಕು ಎಂದು ನೌಕರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್ ಹೇಳಿದರು. ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಬೆಳಗಿಸಿ ಮಾತಾನಾಡಿದರು.

    ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಲು ಸಾಧ್ಯ, ಇತ್ತೀಚೆಗೆ ಏಷ್ಯಾ ಕ್ರೀಡಾಕೂಟದಲ್ಲಿ ಭಾರತ ಅತಿ ಹೆಚ್ಚು ಪದಕಗಳನ್ನು ಗೆದ್ದಿದೆ. ಅದರಂತೆ ಕ್ರೀಡಾಳುಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದರು. ಬಿಸಿಯೂಟ ಯೋಜನಾಧಿಕಾರಿ ಆಂಜನೇಯ ಪ್ರಾಸ್ತಾವಿಕ ಮಾತಾನಾಡಿದರು. ಪಪಂ ಅಧ್ಯಕ್ಷೆ ಎಂ.ಶಾರದಾಬಾಯಿ, ಉಪಾಧ್ಯಕ್ಷೆ ಬಿ.ಸರಸ್ವತಿ, ಶಾಸಕರ ಆಪ್ತ ಕಾರ್ಯದರ್ಶಿ ಬಿ.ಶ್ರೀಕಾಂತ್, ಬಿಇಒ ಯುವರಾಜ್ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಬಿ.ಶಿವಾನಂದ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಸಿದ್ದರಾಧ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೊಟ್ರಗೌಡ, ಉಪಾಧ್ಯಕ್ಷೆ ಎಚ್.ಇಂದಿರಾ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಮಂಜುನಾಥ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಹನುಮೇಶ, ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ, ಪಾಂಡುರಂಗ, ಆರ್.ಬಿ.ಬಸವರಾಜ, ಇಸಿಒ ಆನಂದ, ನಾಗರಾಜ, ಶೇಖರಯ್ಯ, ನಾಗಭೂಷಣ, ಚೆನ್ನಬಸಣ್ಣ, ಕೋಗಳಿ ಕೊಟ್ರೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts