More

    ಸೂಕ್ರ ಚಿಕಿತ್ಸೆಯಿಂದ ಕ್ಯಾನ್ಸ್‌ರ್ ನಿಯಂತ್ರಣ

    ಕೂಡ್ಲಿಗಿ: ಆರಂಭಿಕ ಹಂತದಲ್ಲೇ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚುವುದರಿಂದ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದು ಟಿಎಚ್‌ಒ ಡಾ.ಎಸ್.ಪಿ.ಪ್ರದೀಪ್ ಕುಮಾರ್ ತಿಳಿಸಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ ಕ್ಯಾನ್ಸರ್ ಜಾಗೃತಿಗಾಗಿ ಗುರುವಾರ ಏರ್ಪಡಿಸಿದ್ದ ಸೈಕಲ್ ಜಾಥಾ ಉದ್ಘಾಟಿಸಿ ಮಾತನಾಡಿದರು. ಕ್ಯಾನ್ಸರ್ ಬಂದರೆ ಸಾವು ನಿಶ್ಚಿತ ಎಂಬ ಭಾವನೆ ಜನರಲ್ಲಿ ಬೇರೂರಿದೆ. ಇದನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಕ್ಯಾನ್ಸರ್ ಬಂದಿದೆ ಎಂಬ ಭೀತಿಯೇ ಮನುಷ್ಯನನ್ನು ಅಧೀರನನ್ನಾಗಿ ಮಾಡಿಬಿಡುತ್ತದೆ. ಇದನ್ನು ತೊಲಗಿಸಲು ಬಹು ವಿಶ್ವಾಸದ ಮನೋಸ್ಥೈರ್ಯ ಬೇಕು. ಎಲ್ಲರೂ ಜಾಗೃತಿಯೊಂದಿಗೆ ಕ್ಯಾನ್ಸರ್‌ಮುಕ್ತ ಭಾರತಕ್ಕೆ ಪಣ ತೊಡೋಣ ಎಂದರು.

    ಐಸಿಟಿಸಿ ಆಪ್ತ ಸಮಾಲೋಚಕ ಕೆ.ಪ್ರಶಾಂತ್ ಕುಮಾರ್ ಮಾತನಾಡಿ, ಉತ್ತಮ ಜೀವನ ಶೈಲಿಯಿಂದ ಆರೋಗ್ಯಕರ ಜೀವನ ಸಾಗಿಸುವುದರ ಮೂಲಕ ಸ್ವಸ್ಥ ದೇಹ ಹಾಗೂ ಆರೋಗ್ಯ ಪಡೆಯಬಹುದು. ವಿಶ್ವದ ಎಲ್ಲ ಕಾಯಿಲೆಗಳಲ್ಲಿ ಕ್ಯಾನ್ಸರ್ ಅತ್ಯಂತ ಅಪಾಯಕಾರಿ. ಧೂಮಪಾನ, ಮದ್ಯಪಾನದಂತಹ ದುಶ್ಚಟಗಳಿಂದ ದೂರವಿದ್ದರೆ ಕಾಯಿಲೆಯನ್ನು ತಡೆಗಟ್ಟಬಹುದು ಎಂದರು.

    ಸಾರ್ವಜನಿಕ ಆಸ್ಪತ್ರೆಯಿಂದ ಆರಂಭವಾದ ಸೈಕಲ್ ಜಾಥಾ ಪಟ್ಟಣದ ಬಸವೇಶ್ವರ ವೃತ್ತ, ಡಾ. ಅಂಬೇಡ್ಕರ್ ವೃತ್ತ ಮತ್ತು ರಾಜವೀರ ಮದಕರಿ ನಾಯಕ ವೃತ್ತದ ಮೂಲಕ ಸಾಗಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts