More

    ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ

    ಕೂಡ್ಲಿಗಿ: ಕೇಂದ್ರ ಸರ್ಕಾರದ ಬಿ ಮತ್ತು ಸಿ ದರ್ಜೆ ನೌಕರಿಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಕರ್ನಾಟಕ ರಕ್ಷಣೆ ವೇದಿಕೆ ತಾಲೂಕು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

    ಗ್ರೇಡ್ 2 ತಹಸೀಲ್ದರ್ ಕುಮಾರಸ್ವಾಮಿಗೆ ಮಂಗಳವಾರ ಮನವಿ ಸಲ್ಲಿಸಿದರು. ಕರವೇ ತಾಲೂಕು ಅಧ್ಯಕ್ಷ ಕಾಟೇರ್ ಹಾಲೇಶ್ ಮಾತಾನಾಡಿ, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಬಿ ಮತ್ತು ಸಿ ದರ್ಜೆಯ ಖಾಲಿಯಿರುವ 20 ಸಾವಿರ ಹುದ್ದೆಗಳಿಗೆ ಕಳೆದ ತಿಂಗಳ 17 ರಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸುವಿಕೆ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ವರೆಗೆ ಎಲ್ಲವೂ ಹಿಂದಿ ಅಥವಾ ಇಂಗ್ಲಿಷ್ ಭಾಷೆೆಯಲ್ಲಿವೆ. ಇದು ಕನ್ನಡಿಗರಿಗೆ ಉದ್ಯೋಗವಕಾಶ ಕಸಿಯುವ ಯತ್ನವಾಗಿದೆ. ಹಿಂದಿ ಭಾಷಿಕರಿಗೆ ಅನುಕೂಲವಾಗಲಿದ್ದು, ಹಿಂದಿಯೇತರ ಭಾಷಿಕರಿಗೆ ತೀವ್ರ ಅನ್ಯಾಯವಾಗುತ್ತದೆ. ಈ ಹಿಂದೆ ನಡೆಯುತ್ತಿದ್ದ ವಲಯವಾರು ನೇಮಕಾತಿಯಂತೆ ನಡೆದರೆ ಕನ್ನಡಿಗರಿಗೆ ಅವಕಾಶ ಹೆಚ್ಚು ಸಿಗುತ್ತದೆ. ಆದ್ದರಿಂದ ಕೇಂದ್ರದ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವಾಗ ಆಯಾ ವಲಯದವರಿಗೆ ಪ್ರಾತಿನಿಧ್ಯ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts