More

    ಕೇಂದ್ರ ಬಜೆಟ್‌ಗೆ ಸಿಪಿಐ ವಿರೋಧ

    ಕೂಡ್ಲಿಗಿ: ಕೇಂದ್ರ ಸರ್ಕಾರದ ಬಜೆಟ್ ಜನವಿರೋಧಿಯಾಗಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ತಾಲೂಕು ಘಟಕದ ಸದಸ್ಯರು ಕೂಡ್ಲಿಗಿ ಗ್ರೇಡ್-2 ತಹಸೀಲ್ದಾರ್ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.

    ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ವಿರೋಧಿಯಾಗಿದ್ದು ಕಾರ್ಪೋರೇಟ್ ಕಂಪನಿಗಳ ಪರವಾಗಿದೆ. ಸರ್ಕಾರಿ ಆಸ್ತಿಗಳಾದ ಸಾರಿಗೆ, ವಿಮಾನ, ವಿಮಾ, ಬ್ಯಾಂಕ್, ರೈಲ್ವೆ ಇನ್ನು ಮುಂತಾದವುಗಳನ್ನ ಖಾಸಗೀಕರಣಗೊಳಿಸಿ, ದೇಶದ ಶ್ರೀಮಂತರಿಗೆ ಮಾರಾಟ ಮಾಡುತ್ತಿದ್ದು ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

    ದೇಶವನ್ನು ಅಭಿವೃದ್ಧಿ ಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದೇಶವನ್ನು ಮಾರಾಟ ಮಾಡುತ್ತಿದ್ದು ಕೆಲವು ಶ್ರೀಮಂತರ ಕಂಪನಿಗಳು ಸಾವಿರಾರು ಕೋಟಿ ರೂ. ಹಗರಣಗಳಲ್ಲಿ ತೊಡಗಿವೆ. ಅವುಗಳ ಬಗ್ಗೆ ತನಿಖೆ ಮಾಡಬೇಕೆಂದು ಆಗ್ರಹಿಸಿದರು.

    ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ, ತಾಲೂಕು ಕಾರ್ಯದರ್ಶಿ ಕರಿಯಪ್ಪ, ಗ್ರಾಪಂ ಸದಸ್ಯ ಅಖಿಲ ಭಾರತ ಯುವಜನ ಫೆಡರೇಶನ್ ತಾಲೂಕು ಕಾರ್ಯದರ್ಶಿ ಬಸವರಾಜ್, ಪೆನ್ನಪ್ಪ, ಓಬಳೇಶ್, ಅನಂತೇಶ್, ಕೊಟ್ರೇಶ್, ಈರಣ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts