
ಕುಕನೂರು: ಗ್ರಾಮೀಣ ಪ್ರದೇಶದ ಕೂಲಿಕಾರರು ಕೂಲಿ ಕೆಲಸಕ್ಕೆ ಪಟ್ಟಣಕ್ಕೆ ವಲಸೆ ಹೋಗಬಾರದು ಎನ್ನುವ ಉದ್ದೇಶದಿಂದ ನರೇಗಾ ಯೋಜನೆ ಜಾರಿಗೊಂಡಿದೆ ಎಂದು ತಾಲೂಕು ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಹೇಳಿದರು.
ತಾಲೂಕಿನ ಬಳಗೇರಿ ಗ್ರಾಪಂನಲ್ಲಿ ನರೇಗಾ ಯೋಜನೆಯ ಕೂಲಿಕಾರರು ಕಾರ್ಮಿಕ ದಿನಾಚರಣೆ ನಿಮಿತ್ತ ಕೇಕ್ ಕತ್ತರಿಸುವ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.
ಒಂದು ಕುಟುಂಬಕ್ಕೆ 100 ದಿನಗಳ ಖಾತ್ರಿ ಕೆಲಸವನ್ನು ಗ್ರಾಮ ಪಂಚಾಯಿತಿಯಿಂದ ನೀಡಲಾಗುತ್ತದೆ. ಪ್ರಸ್ತುತ ವರ್ಷದಲ್ಲಿ 316 ರೂ.ಯಿಂದ 349 ರೂ.ಕೂಲಿ ಹೆಚ್ಚಳವಾಗಿದ್ದು, ಇದರಿಂದ ಗ್ರಾಮೀಣ ಪ್ರದೇಶದ ಒಂದು ಕುಟುಂಬ ಅಂದರೆ (ಕನಿಷ್ಟ ಇಬ್ಬರು)ಒಂದು ದಿನ ನರೇಗಾ ಕಾಮಗಾರಿ ನಿರ್ವಹಿಸಿದರೆ 698 ರೂ. ಕೂಲಿ ದೊರೆಯುತ್ತದೆ. ಅದಕ್ಕಾಗಿ ಗ್ರಾಮೀಣ ಪ್ರದೇಶದ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಕಾಮಗಾರಿಯಲ್ಲಿ ತೊಡಗಬೇಕು. ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಮಾಡಿಕೊಂಡು ನರೇಗಾ ಪ್ರಯೋಜನ ಪಡೆಯಬೇಕು ಎಂದರು.
ನಂತರ ಗ್ರಾಮ ಕಾಯಕ ಮಿತ್ರರು ಚುನಾವಣಾ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಮಾಡಿರು.
ಗ್ರಾಪಂ ಕರವಸೂಲಿಗಾರ ನಿಂಗಪ್ಪ, ಕಂಪ್ಯೂಟರ್ ಅಪರೇಟರ್ ಗವಿ ಪಟ್ಟಣಶೆಟ್ಟಿ, ಬಿಎಫ್‌ಟಿ ಮಂಗಳೇಶ, ಗ್ರಾಪಂ ಸಿಬ್ಬಂದಿ ಬಸವರಾಜ ಇತರರಿದ್ದರು.