ಕುಕ್ಕೆ ನಿಯೋಗದಿಂದ ಸಿಎಂ ಭೇಟಿ : ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ

New Project (8)
Published on

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ ದೇವಳದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು ಕುಕ್ಕೆ ದೇವಳದಲ್ಲಿ ಮಾಸ್ಟರ್ ಪ್ಲಾನ್ ಯೋಜನೆಯಲ್ಲಿ ಹಮ್ಮಿಕೊಳ್ಳಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದರು. ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲಿರುವ ವಸತಿ ಸಮುಚ್ಚಯ, ಶ್ರೀ ದೇವಳದ ಸುತ್ತುಪೌಳಿ ಬಗ್ಗೆ ಮಾಹಿತಿ ನೀಡಿದರು. ಬಳಿಕ ಮುಖ್ಯಮಂತ್ರಿಯನ್ನು ಕ್ಷೇತ್ರಕ್ಕೆ ಆಹ್ವಾನಿಸಿದ್ದು, ಪೂರಕವಾಗಿ ಸ್ಪಂದಿಸಿ ಭರವಸೆ ನೀಡಿದ್ದಾರೆ. ವಕೀಲ ಎಂ.ವೆಂಕಪ್ಪ ಗೌಡ, ನಾಗಭೂಷಣ ಗುರೂಜಿ ಪ್ರಮುಖರು ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net