More

    ಲಕ್ಷ ಹಣತೆಗಳಿಂದ ಕಂಗೊಳಿಸಿದ ಆದಿಶೇಷ

    ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವ ಸೋಮವಾರ ರಾತ್ರಿ ನೆರವೇರಿತು. ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗಿದ ಲಕ್ಷ ಹಣತೆ ನಡುವೆ ಪಂಚಶಿಖರಗಳನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವ ನಡೆಯಿತು.

    ಕಾಚುಕುಜುಂಬ ದೈವ ದೇವರನ್ನು ಭೇಟಿಯಾಗಿ ನುಡಿಗಟ್ಟು ನೀಡಿದ ಬಳಿಕ ದೈವದ ನರ್ತನ ಸೇವೆ, ನಂತರ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ನೆರವೇರಿತು. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ದೇವರಿಗೆ ಗುರ್ಜಿ ಮಯೂರ ವಾಹನದಲ್ಲಿ ಪೂಜೆ, ಬಳಿಕ ಕಾಶಿಕಟ್ಟೆಯಲ್ಲಿ ಸಾಂಪ್ರದಾಯಿಕ ಸುಡುಮದ್ದು ಪ್ರದರ್ಶನ ನೆರವೇರಿತು.

    ಸಾಯಂಕಾಲ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಆ ಬಳಿಕ ಪ್ರಧಾನ ದೇವಾಲಯದಲ್ಲಿ 16 ಮಡಕೆಗಳಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಮಾಡಿ ಅದರಲ್ಲಿ ನವಧಾನ್ಯಗಳನ್ನು ಬಿತ್ತುವ ಅಂಕುರಾರ್ಪಣೆ ನೆರವೇರಿತು.

    ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಅಂಗಾರ, ಆಡಳಿತಾಧಿಕಾರಿ ಡಾ.ಯತೀಶ್ ಉಳ್ಳಾಲ್, ಇಒ ರವೀಂದ್ರ ಎಂ.ಎಚ್., ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ದೇವಳದ ಅಭಿವೃದ್ಧಿ ಸಮಿತಿ ಸದಸ್ಯರಾದ ಮೋನರಾಂ ಸುಳ್ಳಿ, ವನಜಾ ವಿ.ಭಟ್, ಪಿ.ಜಿ.ಎಸ್.ಎನ್.ಪ್ರಸಾದ್, ಮನೋಹರ ರೈ ಕಡಬ, ಪ್ರಸನ್ನ ದರ್ಬೆ ಉಪಸ್ಥಿತರಿದ್ದರು.

    ಬೀದಿ ಮಡೆಸ್ನಾನ:ಚಂದ್ರಮಂಡಲೋತ್ಸವದ ಬಳಿಕ ಸುಬ್ರಹ್ಮಣ್ಯನಿಗೆ ಅತ್ಯಂತ ಪ್ರೀಯವಾದ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಭಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts