

ಬಂಟ್ವಾಳ: ನರಿಕೊಂಬು ಕುಂಬಾರರ ಯಾನೆ ಕುಲಾಲರ ಸಂ ಮತ್ತು ಮಹಿಳಾ ಘಟಕ ಕುಲಾಲ ಸಮುದಾಯ ಭವನಕ್ಕೆ ಭಾನುವಾರ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ನರಿಕೊಂಬು ಕುಂಬಾರ ಯಾನೆ ಕುಲಾಲರ ಸಂದ ಅಧ್ಯಕ್ಷ ಎಂ.ಪಿ.ಸುಂದರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತ ಸಂಘ ಅಧ್ಯಕ್ಷ ಮಯೂರ್ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಿದರು.
ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಶಕ್ತಿನಗರ ಶ್ರೀ ವೀರನಾರಾಯಣ ದೇವಸ್ಥಾನ ಅಧ್ಯಕ್ಷ ಸುಂದರ ಕುಲಾಲ್, ಸೇವಾ ಟ್ರಸ್ಟ್ ಅಧ್ಯಕ್ಷ ಪ್ರೇಮಾನಂದ ಕುಲಾಲ್, ಸೇವಾ ಸಮಿತಿ ಅಧ್ಯಕ್ಷ ಕಿರಣ್ ಅಟ್ಲೂರು, ಪತ್ರಕರ್ತ ದಿನೇಶ್ ಕುಲಾಲ್, ಬಂಟ್ವಾಳ ಸಮಾಜ ಸೇವ ಸಹಕಾರಿ ಸಂದ ಅಧ್ಯಕ್ಷ ಸುರೇಶ್ ಕುಲಾಲ್, ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್, ಸಮಾಜ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಜನಾರ್ದನ ಬೊಂಡಾಲ, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್, ಕುಲಾಲ್ ಸಂ ಮೂಡಿಗೆರೆ ಅಧ್ಯಕ್ಷ ಹರೀಶ್ ಮೂಡಿಗೆರೆ, ಉದ್ಯಮಿ ಯು.ರಾಮ ಉಪ್ಪಿನಂಗಡಿ ಉಪಸ್ಥಿತರಿದ್ದರು.
ಕಟ್ಟಡ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಎಂ.ಕೆ. ಸ್ವಾಗತಿಸಿದರು. ಪ್ರಚಾರ ಸಮಿತಿ ವಸಂತ್ ಕುಲಾಲ್ ಭೀಮಗದ್ದೆ ಪ್ರಸ್ತಾವನೆಗೈದರು. ಎಚ್ಕೆ ನಯನಾಡು ನಿರೂಪಿಸಿದರು. ಕೋಶಾಧಿಕಾರಿ ಕರುಣಾಕರ ಕುಲಾಲ್ ನಾಲ ವಂದಿಸಿದರು.