ಕುಲಾಲ ಸಂಘ ಮಹಾಸಭೆ, ಸಾಧಕರಿಗೆ ಸನ್ಮಾನ

kulala sanga
Published on

ಜನ್ನಾಡಿ: ಕುಂದಾಪುರ ಕುಲಾಲ ಸಂಘ 34ನೇ ಮಹಾಸಭೆ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕರಾವಳಿ ಹಿಂದುಳಿದ ವರ್ಗಗಳ ಹಿರಿಯ ನಾಯಕ ಡಾ.ಎಂ.ಅಣ್ಣಯ್ಯ ಕುಲಾಲ್, ಸಂಘ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಉದ್ಘಾಟಿಸಿದರು.

ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ತಜ್ಞ ವೈದ್ಯ ಡಾ.ಸಂತೋಷ್ ಕುಲಾಲ್, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಸಂತೋಷ್ ಕುಮಾರ್, ಯುವ ವೇದಿಕೆ ಜಿಲ್ಲಾ ಅಧ್ಯಕ್ಷ, ಕಾರ್ಯದರ್ಶಿಯಾಗಿ ಆಯ್ಕೆಯಾ ಮಂಜುನಾಥ್ ಕುಲಾಲ್ ಜನ್ಸಾಲೆ ಮತ್ತು ಶಂಕರ ಕುಲಾಲ್ ಮೊಳಹಳ್ಳಿ ಅವರನ್ನು ಸನ್ಮಾನಿಸಲಾಯಿತು.

ನಂತರ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ನಡೆದಿದ್ದು, ಕುಂದಾಪುರ ಕುಲಾಲ ಸಂಘದ ಅಧ್ಯಕ್ಷರಾಗಿ ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ಹಾಗೂ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಹೆಮ್ಮಾಡಿ ಆಯ್ಕೆಯಾದರು. ರೇಖಾ ಪ್ರಭಾಕರ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net