ಸೋಲುಗಳಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್​ಗೆ ಮತ್ತೊಂದು ಆಘಾತ; ತಂಡದಿಂದ ಸ್ಟಾರ್​ ಆಟಗಾರ ಔಟ್​

Kuldeep Pant
Published on

ನವದೆಹಲಿ: 17ನೇ ಆವೃತ್ತಿಯಲ್ಲಿ ಐಪಿಎಲ್​ ಟೂರ್ನಿಯಲ್ಲಿ ಸತತ ಸೋಲು ಹಾಗೂ ದಂಡದಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಇದೀಗ ಮತ್ತೊಂದು ಶಾಕ್​ ಎದುರಾಗಿದ್ದು ಗಾಯದ ಸಮಸ್ಯೆಯಿಂದ ತಂಡದ ಪ್ರಮುಖ ಆಟಗಾರರೊಬ್ಬರು ಹೊರಗುಳಿದಿದ್ದಾರ ಎಂದು ತಿಳಿದು ಬಂದಿದೆ.

ಹಾಲಿ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿರುವ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಗಾಯದ ಸಮಸ್ಯೆ ಮತ್ತೊಂದು ಹೊಡೆತ ನೀಡಿದ್ದು, ಗಾಯಗ ಸಮಸ್ಯೆಯಿಂದ ಬಳಲುತ್ತಿರುವ ಆಟಗಾರ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪ್ರಮುಖ ಸ್ಪಿನ್ನರ್​ ಕುಲ್​ದೀಪ್​ ಯಾದವ್​ ತೊಡೆಸಂಧು ಗಾಯದಿಂದ ಬಳಲುತ್ತಿದ್ದು, ವೈದ್ಯರು ಹೆಚ್ಚಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಲ್​ದೀಪ್​ ಟೂರ್ನಿಯ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಕುಲ್​ದೀಪ್​ ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ ಎಂದು ವರದಿಯಾಗಿದೆ.

ಗಾಯದಿಂದ ಬಳಲುತ್ತಿರುವ ಕುಲ್​ದೀಪ್​ ಯಾದವ್ ಪುನಶ್ಚೇತನಕ್ಕಾಗಿ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ (NCA) ತೆರಳುವ ಸಾಧ್ಯತೆಯಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕುಲ್​ದೀಪ್​ ಯಾದವ್​ ಮತ್ತೆ ಕಣಕ್ಕಿಳಿಯಬೇಕಿದ್ದರೆ ಎನ್​ಸಿಎ ಕಡೆಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಪಡೆಯಬೇಕಾಗುತ್ತದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 4 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 1 ಮ್ಯಾಚ್​ನಲ್ಲಿ ಮಾತ್ರ ಜಯ ಸಾಧಿಸಿದೆ. ಇದೀಗ ಮೂರು ಸೋಲುಗಳೊಂದಿಗೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ರಿಷಭ್ ಪಂತ್ ಪಡೆಗೆ ಕುಲ್​ದೀಪ್​ ಯಾದವ್​ ಅನುಪಸ್ಥಿತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net