17 C
Bangalore
Monday, December 9, 2019

ಬಾರ್ಡರ್​ ಚಿತ್ರಕ್ಕೆ ಸ್ಪೂರ್ತಿಯಾಗಿದ್ದ 1971ರ ಯುದ್ಧದ ಹೀರೋ ಕುಲದೀಪ್​ ಸಿಂಗ್​ ನಿಧನ

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಚಂಡೀಗಢ: 1997ರಲ್ಲಿ ತೆರೆಕಂಡಿದ್ದ ಸೂಪರ್​ಹಿಟ್​ ಚಿತ್ರ ಬಾರ್ಡರ್​ ಚಿತ್ರಕ್ಕೆ ಸ್ಪೂರ್ತಿಯಾಗಿದ್ದ 1971ರ ಭಾರತ-ಪಾಕಿಸ್ತಾನ ಯುದ್ಧದ ಹೀರೋ ಬ್ರಿಗೇಡಿಯರ್​ ಕುಲದೀಪ್​ ಸಿಂಗ್​ ಚಂದ್​ಪುರಿ (78) ಅವರು ನಿಧನರಾಗಿದ್ದಾರೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಚಂದ್​ಪುರಿ ಅವರು ಪಂಜಾಬ್​ನ ಮೊಹಾಲಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಕುಲದೀಪ್​ ಸಿಂಗ್​ ಚಂದ್​ಪುರಿ ಅವರು ಲಾಂಗೆವಾಲಾ ಕದನದ ಮೂಲಕ ಪ್ರಖ್ಯಾತರಾಗಿದ್ದರು. 1971ರ ಡಿಸೆಂಬರ್​ 4ರ ರಾತ್ರಿ ರಾಜಸ್ಥಾನದ ಲಾಂಗೆವಾಲಾ ಗಡಿಯಲ್ಲಿ 40 ಟ್ಯಾಂಕ್​ಗಳೊಂದಿಗೆ ಬಂದಿದ್ದ 2,000 ಪಾಕಿಸ್ತಾನಿ ಸೈನಿಕರನ್ನು ಕುಲದೀಪ್​ ಸಿಂಗ್​ ನೇತೃತ್ವದ 100 ಕ್ಕೂ ಹೆಚ್ಚು ಭಾರತೀಯ ಸೈನಿಕರಿದ್ದ ಸಣ್ಣ ತುಕಡಿ ಮಣಿಸಿತ್ತು.

ಲಾಂಗೆವಾಲಾ ಕದನದಲ್ಲಿ ಇವರು ತೋರಿದ ಪರಾಕ್ರಮಕ್ಕೆ ಭಾರತ ಸರ್ಕಾರ ಮಹಾವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಿತ್ತು. ಲಾಂಗೆವಾಲಾ ಕದನದ ಸಮಯದಲ್ಲಿ ಮೇಜರ್​ ಆಗಿದ್ದ ಕುಲದೀಪ್​ ಸಿಂಗ್​ ಅವರು ಬ್ರಿಗೇಡಿಯರ್​ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.
ಕುಲದೀಪ್​ ಸಿಂಗ್​ ಅವರ ನಿಧನಕ್ಕೆ ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರು ಸಂತಾಪ ಸೂಚಿಸಿದ್ದಾರೆ.

 

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...