ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು: ಗೀತಾ ಸೋಲಿಗೆ ಕುಮಾರ್​ ಬಂಗಾರಪ್ಪ ವ್ಯಂಗ್ಯ

Kumar Bangarappa

ಶಿವಮೊಗ್ಗ: ಕುಟುಂಬ ಕದನಕ್ಕೆ ಸಾಕ್ಷಿಯಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆದ್ದು ಬೀಗಿದ್ದು, ಎದುರಾಳಿ ಕಾಂಗ್ರೆಸ್​ನ ಗೀತಾ ಶಿವರಾಜ್​ಕುಮಾರ್​ ಹಾಗೂ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಮಾಜಿ ಸಿಎಂ ದಿ. ಬಂಗಾರಪ್ಪ ಅವರ ಕುಟುಂಬದ ಕಲಹ ಚುನಾವಣೆ ಮುಗಿದರೂ ನಿಲ್ಲುವಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಮಾಜಿ ಶಾಸಕ ಕುಮಾರ್​ ಬಂಗಾರಪ್ಪ ಅವರು ಬರೆದಿರುವ ಸುದೀರ್ಘ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.

ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ. ಮೇಲಾಗಿ,ಕನ್ನಡದ ಕಣ್ಮಣಿ ಡಾ. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆoದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು.

ಇದನ್ನೂ ಓದಿ: ಡಿ.ಕೆ. ಸುರೇಶ್​ರನ್ನು ಸೋಲಿಸಿದ್ದು ಜನರು, ಬಿಜೆಪಿ-ಜೆಡಿಎಸ್​ ಮೈತ್ರಿ ಅಲ್ಲಾ: ಸಚಿವ ಜಮೀರ್​ ಅಹ್ಮದ್

ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೋಲ್​ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ ಭಾವ, ನನ್ನ ತಂಗಿಯ ಗಂಡ ಡಾ. ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು. ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು.

ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

Share This Article

ನೀವು 1 ತಿಂಗಳ ಕಾಲ ಬೆಳಗಿನ ತಿಂಡಿ ತಿನ್ನುವುದನ್ನ ಬಿಟ್ಟರೆ ಏನಾಗುತ್ತದೆ? ಪ್ರತಿಯೊಬ್ಬರೂ ಇದನ್ನ ತಿಳಿದಿರಲೇಬೇಕು..Health Tips

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ಸಮಯದ ಅಭಾವ ಹಾಗೂ ಇನ್ನಿತರ ಕಾರಣಗಳಿಂದಾಗಿ ಅನೇಕರು ಬೆಳಗಿನ ಉಪಾಹಾರವನ್ನು…

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!

ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…