ಕುಮಾರಸ್ವಾಮಿಗೆ ಆಡಳಿತ ನಡೆಸುವ ಒಳ್ಳೆಯ ಯೋಜನೆಗಳಿದ್ದರೂ ಅವರನ್ನು ಬಿಡುತ್ತಿಲ್ಲ: ಕೊತ್ತೂರು ಮಂಜುನಾಥ್​

ಕೋಲಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಆಡಳಿತ ನಡೆಸುವ ಒಳ್ಳೆಯ ಯೋಜನೆಗಳಿವೆ. ಆದರೆ, ಅವರನ್ನು ಅಧಿಕಾರ ಮಾಡಲು ಬಿಡುತ್ತಿಲ್ಲ ಎಂದು ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ ಅವರು ಹೇಳಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸಮಾರಂಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಉತ್ತಮ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.

ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ನಡೆಸದ ಶಾಸಕರನ್ನು ಅವರ ಮನೆಗೆ ಊಟಕ್ಕೆ ಕರೆಯುತ್ತಿದ್ದರು. ಅವರು ಕ್ಷೇತ್ರದ ಅಭಿವೃದ್ಧಿಗೆ ಕೇಳಿದಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದಂತಹ ಸಿಎಂ ಆಗಿದ್ದರು. ಕರ್ನಾಟಕದಲ್ಲಿ ದೇವರಾಜು ಅರಸು ಸರ್ಕಾರ ಮತ್ತು ಸಿದ್ದರಾಮಯ್ಯ ಅವರ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಬಾರಿಯೂ ಚೆಕ್​​​ ಬೌನ್ಸ್​​​ ಆಗದೇ ಸರ್ಕಾರ ನಡೆಸಿದ ನಾಯಕರಾಗಿದ್ದಾರೆ. ನಾನು ಸಿದ್ದರಾಮಯ್ಯ ಅವರ ಪಕ್ಕಾ ಶಿಷ್ಯಾ ಎಂದು ಅವರ ಆಡಳಿತವನ್ನು ಹೊಗಳಿ ಮಾತನಾಡಿದ್ದಾರೆ.(ದಿಗ್ವಿಜಯ ನ್ಯೂಸ್​)