More

    ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!

    ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ!

    2023ಕ್ಕೆ ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಶತಾಯಗತಾಯ ಜೆಡಿಎಸ್​ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಪಣ ತೊಟ್ಟಿದ್ದು, ಆ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ನಿರತರಾಗಿದ್ದಾರೆ. ಚುನಾವಣೆಗೆ ಇನ್ನೂ 2 ವರ್ಷ ಸಮಯ ಇದೆ. ಆಗಲೇ ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್​ ಟಿಕೆಟ್​ ಆಕಾಂಕ್ಷಿತರ ನಡುವೆ ಪೈಪೋಟಿ ಏರ್ಪಟ್ಟಿದೆ. ಇದನ್ನೂ ಓದಿರಿ ವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!

    ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!ಈ ನಡುವೆ ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಸತಃ ಕುಮಾರಸ್ವಾಮಿಯೇ ಭಾನುವಾರ ಘೋಷಿಸಿದ್ದಾರೆ.

    ಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಆನೇಕಲ್​ ಮತ್ತು ಬೆಂ.ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್​ಡಿಕೆ, ಆನೇಕಲ್​ನಿಂದ ಕೆ.ಪಿ.ರಾಜು ಹಾಗೂ ಬೆಂ.ದಕ್ಷಿಣ ಕ್ಷೇತ್ರದಿಂದ ಪ್ರಭಾಕರ್​ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂದರು. ಮುಂಬರುವ ಚುನಾಣೆಗೆ ಈ ಎರಡೂ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್​ ಪ್ರಕಟಿಸಿದ್ದು, ಇಲ್ಲಿನದ್ದೇ ರಾಜ್ಯದಲ್ಲಿ ಮೊದಲು.

    ಕಳೆದ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆಯಿಂದ ನಮಗೆ ತೊಂದರೆ ಆಯಿತು. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಮುಂದಿನ ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದರು. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತಿರುವ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್​ ರೆಡ್ಡಿಗೆ ಟಿಕೆಟ್ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

    ಎಫ್​ಡಿಎ ಪ್ರಶ್ನೆಪತ್ರಿಕೆ ಲೀಕ್: 14ಕ್ಕೇರಿದ ಬಂಧಿತರ ಸಂಖ್ಯೆ, 36 ಪುಟಗಳ ಪ್ರಶ್ನೆಪತ್ರಿಕೆ ಸೀಜ್

    ಧಾರವಾಡದಲ್ಲಿ ಭೀಕರ ಅಪಘಾತ: ಸಾವಿಗೂ ಮುನ್ನ ಬಾಲ್ಯ ಸ್ನೇಹಿತೆಯರ ಸುಂದರ ಕ್ಷಣಗಳ ಎಕ್ಸ್​ಕ್ಲೂಸಿವ್​ ವಿಡಿಯೋ ಇಲ್ಲಿದೆ​

    VIDE0| ಅಬ್ಬಬ್ಬಾ! ಈ​​ ಜೋಡಿ ಕಂಡವರ ಮನೆ ಮುಂದೆ ಕುಳಿತು ಹೀಗಾ ಮಾಡೋದು?

    ಕಾಲೇಜು ಯುವತಿಯ ಬೆತ್ತಲೆ ಫೋಟೋ ಸ್ನೇಹಿತರ ಕೈಯಲ್ಲಿ! ಮುಂದೆ ನಡೆದೇ ಹೋಯ್ತು ಅವಾಂತರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts