More

    40%ಗಾಗಿ ದೇವರ ದುಡ್ಡನ್ನೇ ನುಂಗಿ ಬಿಜೆಪಿ ನೀರು ಕುಡಿಯುತ್ತಿದೆ; ಎಚ್​ಡಿಕೆ ಆರೋಪ

    ಬೆಂಗಳೂರು: ಮುಜರಾಯಿ ದೇವಾಲಯದ ಆದಾಯ ಆಯಾ ದೇಗುಲದ ಅಭಿವೃದ್ಧಿಗೆ ಬಳಸಬೇಕು ಎನ್ನುವುದು ಕಾನೂನು. ಬಿಜೆಪಿ ಸರ್ಕಾರ ಕಾನೂನನ್ನು ಗಾಳಿಗೆ ಬಿಟ್ಟು, 40%ಗಾಗಿ ದೇವರ ದುಡ್ಡನ್ನೇ ನುಂಗಿ ನೀರು ಕುಡಿದಿದೆ, ಹುಂಡಿಯ ಹಣವನ್ನೂ ಚುನಾವಣೆಗೆ ಸುರಿಯಲು ಹೊರಟಿದೆ. ಪಾಪದ ಪಕ್ಷಕ್ಕೆ ಪ್ರಾಯಶ್ಚಿತ್ತ ತಪ್ಪದು. ಶ್ರೀ ನಂಜುಂಡೇಶ್ವರನ ಶಾಪವೂ ತಟ್ಟದೆ ಇರದು ಎಂದು ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಎಚ್​ಡಿಕೆ, ಸ್ವಯಂ ಘೋಷಿತ ಧರ್ಮೋದ್ಧಾರಕರು, ಹಿಂದು ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡವರೆಂದು ಬೀಗುವವರಿಗೆ ಧರ್ಮವೆಂದರೆ ಅಧಿಕಾರಕ್ಕಿರುವ ರಾಜಮಾರ್ಗವಾಗಿದೆ. ದೇವರ ಹುಂಡಿ ಎಂಬುದು ಲಜ್ಜೆಗೆಟ್ಟು ಹೊಡೆದುಕೊಳ್ಳುವ ನಿಧಿ. ಇವರಿಗೆ ನಾಚಿಕೆ, ಸಂಕೋಚ ಎನ್ನುವುದು ಕನಿಷ್ಠಕ್ಕಿಂತ ಕಡಿಮೆ ಎನ್ನುವುದಕ್ಕೆ ಸಾಕ್ಷಿ ಇದೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ

    ಬಿಜೆಪಿ ಸರ್ಕಾರ ಹೇಳುವುದು ಒಂದು, ಮಾಡುವುದು ಇನ್ನೊಂದು. ಧರ್ಮ, ದೇವರು ಎನ್ನುವುದು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ. ಶ್ರದ್ಧೆ, ಭಕ್ತಿ ಜನರದ್ದು; ಭುಕ್ತಿ ಮಾತ್ರ ಬಿಜೆಪಿಯದ್ದು. ನೀಚತನದ ಪರಮಾವಧಿ ಇದು. ಸಮುದಾಯ ಭವನಗಳ ನಿರ್ಮಾಣಕ್ಕೆ ದೇವರ ದುಡ್ಡೇ ಬೇಕೆ? ಕೇತ್ರಕ್ಕೆ ಸರಕಾರ ಕೊಟ್ಟ ಹಣ, ಶಾಸಕರ ವಿಶೇಷ ಅನುದಾನ ಇತ್ಯಾದಿಗಳೆಲ್ಲ ಎಲ್ಲಿ ಹೋದವು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ರಾಜ್ಯ ಬಿಜೆಪಿ ಸರ್ಕಾರವು ಶ್ರೀ ನಂಜುಂಡೇಶ್ವರ ದೇವರ ಹುಂಡಿಯನ್ನು ಎಗರಿಸುವ ಶಾಸಕರ ಧೂರ್ತ ಪ್ರಯತ್ನಕ್ಕೆ ತಡೆ ಹಾಕಬೇಕು. ಈ ಬಗ್ಗೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ದೇವರ ದುಡ್ಡನ್ನು ದೇವಾಲಯದ ಅಭಿವೃದ್ಧಿಗೇ ಬಳಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಕಾಣೆಯಾದ ಐಎಎಸ್ ಅಧಿಕಾರಿಯ ನಾಯಿ; ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಿಸಿದ ಪೊಲೀಸರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts