ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಕ್ರಮ: ಟೀಚರ್- ಮೆಂಟರ್, ಗುರು ಚೇತನ, ಸ್ಪರ್ಧಾ ಕಲಿ…

ಬೆಂಗಳೂರು: ದೋಸ್ತಿ ಸರ್ಕಾರದ ಎರಡನೇ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಲು ಗಮನ ಕೇಂದ್ರೀಕರಿಸಿದ್ದು, ಅದಕ್ಕಾಗಿ ಹಲವಾರು ಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

  • ಶಾಲೆಗಳ ಮೂಲಭೂತ ಸೌಕರ್ಯ ಆಧುನೀಕರಣಕ್ಕೆ ಕ್ರಮಕೈಗೊಳ್ಳಲಾಗಿದ್ದು, 1,500 ಹೊಸ ಶಾಲಾ ಕೊಠಡಿ ನಿರ್ಮಾಣ, 5000 ಶಾಲಾ ಕೊಠಡಿ ಉನ್ನತೀಕರಣ ಮತ್ತು 1000 ಶಾಲೆಗಳಿಗೆ ಕಲಿಕಾ ಉಪಕರಣ ವಿತರಣೆ ಹಾಗೂ ಶಾಲಾ ಕಟ್ಟಡಗಳ ನಿರ್ವಹಣೆಗೆ ಒಬ್ಬ ಎಸ್ಟೇಟ್ ಅಧಿಕಾರಿ ನೇಮಕ.
  • ‘ಗುರುಚೇತನ’ ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ 10 ದಿನಗಳ ತರಬೇತಿ.
  • ಕಲಿಕೆ ಸುಧಾರಣೆಗೆ ಟೀಚರ್- ಮೆಂಟರ್ ಕಾರ್ಯಕ್ರಮದ ಮುಖಾಂತರ ಶಿಕ್ಷಕರಿಗೆ ಅರಿವು ಮೂಡಿಸಲು ಕಾರ್ಯಕ್ರಮ, ಮುಂದಿನ 4 ವರ್ಷದಲ್ಲಿ ಹೋಬಳಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ 1 ತರಗತಿಗಳಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸಲು 1000 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ.
  • ಸರ್ಕಾರಿ ಶಾಲಾ ಶಿಕ್ಷಕರಿಗೆ ಭಾಷಾ ವಿಷಯಗಳಲ್ಲಿ ನಿರಂತರ ತರಬೇತಿ ನೀಡಲು 2 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಆಲೂರು ವೆಂಕಟರಾವ್ ಅವರ ಹೆಸರಿನಲ್ಲಿ ಸುಸಜ್ಜಿತ ಭಾಷಾ ಕೌಶಲ್ಯ ತರಬೇತಿ ಕೇಂದ್ರ ಪ್ರಾರಂಭ.
  • ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ “ಸ್ಪರ್ಧಾ ಕಲಿ” ಯೋಜನೆ ಪ್ರಾರಂಭ.
  • ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕ ಪಡೆಯುವ ಶೈಕ್ಷಣಿಕ ಜಿಲ್ಲೆಯ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು 1.5 ಕೋಟಿ ಅನುದಾನ.
  • ಎಸ್.ಎಸ್.ಎಲ್.ಸಿ ಮೌಲ್ಯ ಮಾಪನ ಕೇಂದ್ರಗಳ ಡಿಜಿಟಲೀಕರಣಕ್ಕೆ 1 ಕೋಟಿ ರೂ. ಅನುದಾನ.
  • ಪದವಿ ಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆಸಕ್ತಿಯ ವಿಷಯದಲ್ಲಿ ವೃತ್ತಿ ಶಿಕ್ಷಣದ ತರಬೇತಿ ನೀಡಲು 2 ಕೋಟಿ ರೂ. ಅನುದಾನ.

ಉನ್ನತ ಶಿಕ್ಷಣಕ್ಕೂ ಆದ್ಯತೆ

  • ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾನಿಲಯದಲ್ಲಿ ಹೊಸ ಪೀಳಿಗೆ ಉನ್ನತ ಶಿಕ್ಷಣ” ((Next Generation Learning Initiative) ಕಾರ್ಯಕ್ರಮದ ಮೂಲಕ ಹೊಸ ಕಲಿಕೆ ವಿಧಾನಗಳ ಅಳವಡಿಕೆ. ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ರಚನೆ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿ.ಇ.ಟಿ. ಪರೀಕ್ಷೆಯನ್ನು ಆನ್‍ಲೈನ್ ಮೂಲಕ ನಡೆಸಲು ಕ್ರಮ. ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಆಧಾರಿತ ಡಿಜಿಟಲ್ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಆನ್‍ಲೈನ್ ಮೂಲಕ ವಿತರಣೆ ಹಾಗೂ ದೃಢೀಕರಣ ವಿಧಾನ ಜಾರಿಗೆ 2 ಕೋಟಿ ರೂ. ಅನುದಾನ.
  • ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮರುವಿಂಗಡಣೆ ಮಾಡಿ, ಹಾಸನದಲ್ಲಿ ಒಂದು ಹೊಸ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ.
  • ಏಳನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಸರ್ಕಾರಿ/ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕ ಮತ್ತು ಮತ್ತು ತತ್ಸಮಾನ ವೃಂದಗಳ ವೇತನ ಮತ್ತು ಭತ್ಯೆ ಪರಿಷ್ಕರಣೆ.
  • ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳಲ್ಲಿ ಪ್ರಯೋಗಾಲಯ/ ಕಾರ್ಯಾಗಾರ ಸೌಲಭ್ಯ ಕಲ್ಪಿಸಲು 10 ಕೋಟಿ ರೂ. ಅನುದಾನ.