More

    ಅಮಿತ್ ಶಾ ಭೇಟಿಯಾದ ಕುಮಾರಸ್ವಾಮಿ: ಸೀಟು ಹಂಚಿಕೆ ಫೈನಲ್ ಸಾಧ್ಯತೆ!

    ನವದೆಹಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಚುನಾವಣಾ ದಿನಾಂಕ ಕೂಡ ಘೋಷಣೆಯಾಗಿದೆ. ಇದರ ನಡುವೆ ಜೆಡಿಎಸ್​ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಶನಿವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

    ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕಾಂಗ್ರೆಸ್​ಗೆ ಭ್ರಷ್ಟಾಚಾರವೇ ಆಕ್ಸಿಜನ್​: ಮೋದಿ  

    ತಮ್ಮ ಭೇಟಿಯ ವೇಳೆ ರಾಜ್ಯದ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್​ ನಡುವಿನ ಉಳಿದ ಸೀಟು ಹಂಚಿಕೆ ಕುರಿತು ಚೆರ್ಚೆ ನಡೆಸಿದ್ದಾರೆ.

    ಅಮಿತ್ ಶಾ ಭೇಟಿಯಾದ ಕುಮಾರಸ್ವಾಮಿ: ಸೀಟು ಹಂಚಿಕೆ ಫೈನಲ್ ಸಾಧ್ಯತೆ!

    ಕರ್ನಾಟಕ 28 ಕ್ಷೇತ್ರಗಳ ಪೈಕಿ 25 ಬಿಜೆಪಿ ಮತ್ತು ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟು ಕೊಟ್ಟಿರುವುದಾಗಿ ಈಗಾಗಲೇ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಕೋಲಾ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳಲು ಹಾಲಿ ಸಂಸದ ಮುನಿಸ್ವಾಮಿ ಕಸರತ್ತು ನಡೆಸುತ್ತಿದ್ದಾರೆ. ಅದರೆ ಕೋಲಾರ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರು ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದು ಅಮಿತ್ ಶಾ ಕೂಡ ಇದಕ್ಕೆ ಗ್ರೀನ್ ಸಿಗ್ನಲ್​ ತೋರಿಸಿದ್ದಾರೆ ಎನ್ನಲಾಗಿದೆ.

    ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿರುವ ಡಾ.ಸಿ.ಎನ್.ಮಂಜುನಾಥ್ ಅವರ ದಂಪತಿಗಳನ್ನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಡಾ.ಸಿ.ಎನ್.ಮಂಜುನಾಥ್ ಹಾಗೂ ಅನಸೂಯ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿಗೆ ಬಿಬಿಎಂಪಿ ಕಮೀಷನರ್​ ತುಷಾರ್ ಗಿರಿನಾಥ್ ಆದೇಶ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts