More

    ವಿದ್ಯುತ್ ಕಳ್ಳತನ ಮರೆಮಾಚಲು ಕುಮಾರಸ್ವಾಮಿ ವೀಡಿಯೋ ಬಿಡುಗಡೆ: ಸಿದ್ದರಾಮಯ್ಯ ಟಾಂಗ್

    ಬೆಂಗಳೂರು ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದೆ. ಅಲ್ಲಿಂದ ಈ ವರೆಗೆ ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆಗೆ ಹಣ ಪಡೆದಿದ್ದೇನೆಂದು ನಿರೂಪಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲ್ ಎಸೆದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ವರ್ಗಾವಣೆ ಕುರಿತು ಮಾತನಾಡುತ್ತಿರುವ ಎನ್ನಲಾದ ವೀಡಿಯೋವನ್ನು ಎಚ್.ಡಿ. ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಗುರುವಾರ ಅವರು ಪ್ರತಿಕ್ರಿಯಿಸಿದರು.
    ಮಾಜಿ ಮುಖ್ಯಮಂತ್ರಿಯಾಗಿ ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಪಡೆದು ಮನೆಯನ್ನು ಬೆಳಗಿಸಿದ್ದಾರೆ. ಈ ಅಪರಾಧವನ್ನು ಮುಚ್ಚಿಹಾಕಲು ಈ ರೀತಿ ವೀಡೀಯೋ ಬಿಟುಗಡೆ ಮಾಡಿದ್ದಾರೆ ಎಂದರು.

    ಆಶ್ರಯ ಸಮಿತಿ ಅಧ್ಯಕ್ಷರು, ಕೆಡಿಪಿ ಸದಸ್ಯರಾಗಿರುವ ಹಾಗೂ ಕ್ಷೇತ್ರವನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ನನ್ನ ಬಳಿ ಮಾತನಾಡಿ ಸಿಎಸ್‌ಆರ್ ನಿಧಿಯ ಕುರಿತು ಪ್ರಶ್ನಿಸಿದಾಗ ಪಟ್ಟಿಯನ್ನು ಮಹದೇವಪ್ಪ ಅವರಿಗೆ ನೀಡಲಾಗಿದೆ ಎಂದು ತಿಳಿಸಿದೆ. ವೀಡಿಯೋದಲ್ಲಿ ಹಣ ಅಥವಾ ವರ್ಗಾವಣೆಯ ಬಗ್ಗೆ ಮಾತನಾಡಿಲ್ಲ. ಇದನ್ನೇ ವರ್ಗಾವಣೆಗೆ ತಳಕು ಹಾಕಿದರೆ ಹೇಗೆ? ಕುಮಾರಸ್ವಾಮಿ ಅವರ ಕಾಲದಲ್ಲಿ ಏನಾಗುತ್ತಿತ್ತೋ ಗೊತ್ತಿಲ್ಲ. ಅದರಿಂದ ಹೊರಬರಲು ಅವರಿಗೆ ಆಗುತ್ತಿಲ್ಲ. ಸಾಕ್ಷ್ಯ ಇಲ್ಲದೇ ಏನು ಬೇಕಾದರೂ ಹೇಳಬಹುದು ಎಂದು ಟಾಂಗ್ ನೀಡಿದರು.

    ಸಿಎಸ್‌ಆರ್ ನಿಧಿ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂಬ ಪ್ರಶ್ನೆಗೆ, ಸಿಎಸ್‌ಆರ್ ನಿಧಿ ಬಗ್ಗೆ ಮಾತನಾಡಿರುವುದಕ್ಕೆ ದಾಖಲೆ ಇರುತ್ತದೆಯೇ? ಎಂದು ಕೇಳಿದರು.

    ವಿಶೇಷಾಧಿಕಾರಿ ಮಹದೇವ್ ಅವರಿಗೆ ಅಕ್ರಮವಾಗಿ ಬಡ್ತಿ ನೀಡಿ ಇಟ್ಟುಕೊಳ್ಳಲಾಗಿದೆ ಎಂಬ ಬಗ್ಗೆ ಉತ್ತರಿಸಿದ ಸಿಎಂ, ಮಹದೇವ್ ಅವರು ನಮ್ಮೂರಿನವರೇ, ಉಪನೋಂದಣಾಧಿಕಾರಿಯಾಗಿದ್ದಾರೆ. ಅವರನ್ನು ನಮ್ಮ ಕಚೇರಿಗೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ ತಪ್ಪೇನು?
    – ಸಿದ್ದರಾಮಯ್ಯ, ಮುಖ್ಯಮಂತ್ರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts