ಸಿನಿಮಾ

ಮೇ 3 ಕ್ಕೆ ಕುಮಾರಸ್ವಾಮಿ ಆಗಮನ

ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದಲ್ಲಿ ಜೆಡಿಎಸ್ ಪ್ರಚಾರ ಸಭೆ ಮೇ 3 ರಂದು ಬೆಳಗ್ಗೆ 10:30 ಗಂಟೆಗೆ ಸಕ್ರಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಬಾಗಲಕೋಟೆ ಅಭ್ಯರ್ಥಿ ಡಾ.ದೇವರಾಜ ಪಾಟೀಲ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9:40 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ಆಗಮಿಸಲಿದ್ದಾರೆ. ರೈಲು ನಿಲ್ದಾಣ, ಬಸವೇಶ್ವರ ವೃತ್ತದಲ್ಲಿ ಮೆರವಣಿಗೆ ನಡೆಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಸಮಾವೇಶದಲ್ಲಿ ಆರಂಭಗೊಳ್ಳಿದ್ದು, ೧೦ ಸಾವಿರ ಜನ ಭಾಗವಹಿಸಲಿದ್ದಾರೆ ಎಂದರು.

ಬಾಗಲಕೋಟೆ ಮತಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಒಳ್ಳಿಯ ವಾತವರಣ ಇದೇ. ನಾಡಿನ ಸಮಗ್ರ ಅಭಿವೃದ್ಧಿಗೆ ಜೆಡಿಸ್ ವಿಶೇಷ ಸಂಕಲ್ಪ ಮಾಡಿದೆ. ಶಿಕ್ಷಣ, ನೀರಾವರಿ, ರೈತ ಚೈತನ್ಯ, ಆರೋಗ್ರ ಕ್ಷೇತ್ರದಲ್ಲಿ ಮಹತ್ವದ ಯೋಜನೆಗಳು ಹಾಗೂ ಪಂಚ ರತ್ನ ಯೋಜನೆಗಳನ್ನು ಜಾರಿಗೊಳಿಸಲು ಬದ್ಧವಾಗಿದೆ.ಇನ್ನು ಬಾಗಲಕೋಟೆ ಮತಕ್ಷೇತ್ರದ ಅಭಿವೃದ್ಧಿಗೆ ನನ್ನದೆ ಆದ ಪರಿಕಲ್ಪನೆ ಇಟ್ಟುಕೊಂಡಿದ್ದೇನೆ. ಒಂದು ಜೆಡಿಎಸ್ ಸ್ವತಂತ್ರ ಸರ್ಕಾರಕ್ಕೆ ಜನ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ರೇಣುಕಾ ಭಜಂತ್ರಿ, ಶ್ರೀನಿವಾಸ ಗೌಡರ, ಡಿ.ಬಿ.ಸಿದ್ದಾಪುರ ಸುದ್ದಿಗೋಷ್ಠಿಯಲ್ಲಿ ಇದ್ದರು.

Latest Posts

ಲೈಫ್‌ಸ್ಟೈಲ್