More

    ಕುಂಭಮೇಳದ ಯಶಸ್ವಿಗೆ ಸಮಿತಿ ರಚನೆ: ಜಿಲ್ಲಾಧಿಕಾರಿ ಎಸ್.ಅಶ್ವಥಿ ಮಾಹಿತಿ

    ಮಂಡ್ಯ: ಕೆ.ಆರ್.ಪೇಟೆ ತಾಲೂಕು ಅಕ್ಕಿ ಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ-ಸಂಗಾಪುರ-ಪುರದ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ 16ರವರೆಗೆ ಕುಂಭಮೇಳ ನಡೆಯಲಿದೆ. ಆದ್ದರಿಂದ ಸಕಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕುಂಭಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಮಾತನಾಡಿದರು. ಅ.6ರಂದು ಮಲೈ ಮಹದೇಶ್ವರ ಬೆಟ್ಟದಲ್ಲಿ 3 ಜ್ಯೋತಿರಥಕ್ಕೆ ಚಾಲನೆ ನೀಡಲಾಗುವುದು. ಈ ರಥಗಳು ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಗ್ರಾಮಗಳಲ್ಲಿ ಸಂಚರಿಸಿ 13ರಂದು ಕೆ.ಆರ್.ಪೇಟೆಗೆ ತಲುಪಲಿದೆ. ಬಳಿಕ ತಾಲೂಕಿನಲ್ಲಿ ಜ್ಯೋತಿ ಮೆರವಣಿಗೆ ನಡೆಯಲಿದೆ. ನಂತರ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮಕ್ಕೆ ತಲುಪಲಿದೆ. ಇನ್ನು ಕುಂಭ ಮೇಳ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಯಾವುದೇ ಲೋಪಕ್ಕೆ ಆಸ್ಪದ ನೀಡದೆ ಕಾರ್ಯನಿರ್ವಹಿಸಲು ಸೂಚಿಸಿದರು.
    ಲಕ್ಷಾಂತರ ಭಕ್ತರು ಕುಂಭಮೇಳಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆಯಾಗಬೇಕು. ಈಗಾಗಲೇ ಹಲವಾರು ದಾನಿಗಳು ಅಕ್ಕಿ, ಬೇಳೆ ಇನ್ನಿತರ ಆಹಾರ ಪದಾರ್ಥಗಳನ್ನು ನೀಡುತ್ತಿದ್ದು, ಅವುಗಳನ್ನು ಸೂಕ್ತವಾಗಿ ಸಂಗ್ರಹಿಸಿಕೊಳ್ಳಬೇಕು. ಇನ್ನುಳಿದಂತೆ ಬೇಕಿರುವ ಆಹಾರ ಪದಾರ್ಥಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಆಹಾರ ವಿತರಿಸಲು ಬೇಕಿರುವ ಸಂಖ್ಯೆಯಲ್ಲಿ ಕೌಂಟರ್ ತೆರೆಯಿರಿ ಎಂದರು.
    ಅಂತೆಯೇ ಕುಂಭಮೇಳ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲು ಬಹಳ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಬೇಕು. ಜತೆಗೆ ರಸ್ತೆ, ಶೌಚಗೃಹ, ವಾಹನ ನಿಲ್ದಾಣ, ಕುಡಿಯುವ ನೀರು, ಊಟೋಪಚಾರ, ನೈರ್ಮಲ್ಯ, ತಂಗುದಾಣ, ವೈದ್ಯಕೀಯ ಸೇವೆಗಳು ಮತ್ತು ತುರ್ತುಚಿಕಿತ್ಸೆ, ಅಗ್ನಿಶಾಮಕದಳ, ಹೆಲಿಪ್ಯಾಡ್, ರಕ್ಷಣಾ ಕಾರ್ಯದ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಸೀಲ್ದಾರ್ ಗಳಾದ ಕುಂಇ ಅಹಮದ್, ಎಂ.ವಿ.ರೂಪಾ, ನಯನಾ, ನರಸಿಂಹಮೂರ್ತಿ, ನಂದೀಶ್, ಜಿಲ್ಲಾ ಯೋಜನಾಧಿಕಾರಿ ತುಷಾರಮಣಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಕುಂಭಮೇಳ ಕಾರ್ಯಕ್ರಮದ ಸಂಯೋಜಕ ರಂಗನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts