More

    ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕಾದರೆ ಹೀಗೆ ಮಾಡಿ ಎಂದ ಅನಿಲ್ ಕುಂಬ್ಳೆ

    ನವದೆಹಲಿ: ಭಾರತ ತಂಡ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಿತ್ತು. ಆದರೆ ಈ ಬಾರಿ ಅದನ್ನು ಪುನರಾವರ್ತಿಸುವುದು ಸುಲಭವಲ್ಲ. ಆದರೆ ಭಾರತ ತಂಡ ಈ ಬಾರಿಯೂ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಅವಕಾಶ ಹೊಂದಿದೆ ಎಂದಿರುವ ಮಾಜಿ ನಾಯಕ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ, ಅದಕ್ಕಾಗಿ ಭಾರತ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವುದು ಅಗತ್ಯವಾಗಿರುತ್ತದೆ ಎಂದಿದ್ದಾರೆ.

    ಡಿಸೆಂಬರ್ 17ರಿಂದ ಅಡಿಲೇಡ್‌ನಲ್ಲಿ ನಡೆಯಲಿರುವ ಅಹರ್ನಿಶಿ ಟೆಸ್ಟ್ ಪಂದ್ಯದೊಂದಿಗೆ ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಆರಂಭಗೊಳ್ಳುತ್ತಿದೆ. ಈ ಮೊದಲ ಟೆಸ್ಟ್ ಪಂದ್ಯದಲ್ಲೇ ಗೆಲುವು ದಾಖಲಿಸಿದರೆ ಭಾರತಕ್ಕೆ ಸರಣಿ ಜಯಿಸುವ ಅವಕಾಶ ಹೆಚ್ಚಲಿದೆ ಎಂದು ಕುಂಬ್ಳೆ ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲೇ ಎಡವಿದರೆ ಆಗ, ನಾಯಕ ವಿರಾಟ್ ಕೊಹ್ಲಿ ಅವರಿಲ್ಲದೆ ಉಳಿದ 3 ಟೆಸ್ಟ್ ಪಂದ್ಯಗಳಲ್ಲಿ ಸರಣಿಯನ್ನು ಒಲಿಸಿಕೊಳ್ಳುವುದು ಕಷ್ಟಕರವಾಗಲಿದೆ ಎಂದಿದ್ದಾರೆ.

    ‘ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಮೇಲುಗೈ ಸಾಧಿಸಿದರೆ ಆಗ ಭಾರತ ತಂಡಕ್ಕೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಈ ಬಾರಿಯೂ ಸರಣಿ ಗೆಲ್ಲುವ ಅವಕಾಶ ಹೆಚ್ಚಿರಲಿದೆ. ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಈ ಬಾರಿ ಆಸೀಸ್ ತಂಡವನ್ನು ಕೂಡಿಕೊಂಡಿದ್ದರೆ, ಭಾರತ ತಂಡ ಕೊನೆಯ 3 ಟೆಸ್ಟ್ ಪಂದ್ಯಗಳನ್ನು ವಿರಾಟ್ ಕೊಹ್ಲಿ ಅವರಿಲ್ಲದೆ ಆಡುವ ಸವಾಲು ಹೊಂದಿದೆ. ಇದರ ಹೊರತಾಗಿಯೂ ಭಾರತ ತಂಡಕ್ಕೆ ಸರಣಿ ಗೆಲ್ಲುವ ಸಾಮರ್ಥ್ಯವಿದೆ’ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

    ‘ಆಸ್ಟ್ರೇಲಿಯಾ ತಂಡ ಕಳೆದ ಕೆಲ ವರ್ಷಗಳಿಂದ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಉತ್ತಮ ನಿರ್ವಹಣೆ ತೋರುತ್ತ ಬಂದಿದೆ. ಹೀಗಾಗಿ ಅದರಲ್ಲಿ ಒಂದು ವೇಳೆ ಭಾರತ ತಂಡ ಗೆಲುವು ದಾಖಲಿಸಿದರೆ ಆಗ ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆ ಉಂಟಾಗಲಿದೆ. ಹೀಗಾಗಿ ಮೊದಲ ಟೆಸ್ಟ್‌ನಲ್ಲಿ ಯಶಸ್ಸು ಕಂಡರೆ ಆಗ ಭಾರತವೇ ಸರಣಿ ಗೆಲ್ಲುವ ಫೇವರಿಟ್ ಎನಿಸಲಿದೆ. ಆದರೆ ಅದು ಸಾಧ್ಯವಾಗದಿದ್ದರೆ, ವಿರಾಟ್ ಕೊಹ್ಲಿ ಅವರಿಲ್ಲದೆ ಕೊನೆಯ 3 ಟೆಸ್ಟ್‌ಗಳಲ್ಲಿ ಸರಣಿ ಒಲಿಸಿಕೊಳ್ಳುವುದು ಕಷ್ಟಕರವಾಗಲಿದೆ’ ಎಂದು ಕುಂಬ್ಳೆ ಹೇಳಿದ್ದಾರೆ.

    ದಕ್ಷಿಣ ಆಫ್ರಿಕಾ ಟೆಸ್ಟ್ ತಂಡಕ್ಕೂ ಕ್ವಿಂಟನ್ ಡಿಕಾಕ್ ನಾಯಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts