ವಿಜಯಪುರ: ದೇಶದಲ್ಲಿ ಸರ್ಕಾರಿ ಹಾಗೂ ಖಾಸಗಿ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಬೇಕು. ಹುದ್ದೆ ಪಡೆಯಲು ಕೌಶಲ್ಯವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಗುರುಪಾದಯ್ಯ ಹಿರೇಮಠ ಹೇಳಿದರು.
ಯುವ ಕೌಶಲ್ಯ ದಿನಾಚರಣೆ ಹಿನ್ನೆಲೆ ನಗರದ ಕುಮುದಬೇನ ದರಬಾರ ಮಹಾವಿದ್ಯಾಲಯದಲ್ಲಿ ಒಂದು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವೇಳೆ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಿದರು.
ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಸೋಮಶೇಖರ ಆಲಮೇಲ ಹಾಗೂ ರ್ಇಾನ್ ವಾಹಿದಿ ಮತ್ತು ಕಾಲೇಜಿನ ಪ್ರಾಂಶುಪಾಲ ವಿನಾಯಕ ಗ್ರಾಮಪುರೋಹಿತ ಉಪಸ್ಥಿತರಿದ್ದರು. ವಿನೋದ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ದುರ್ಗಾಲಕ್ಷ್ಮೀ ಆಚಾರ್ಯ ವಂದಿಸಿದರು.