More

    ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿ ಜಾರಿ ಆಗಲಿ: ರೈತ ಮುಖಂಡ ಕಸವನಹಳ್ಳಿ ರಮೇಶ್ ಒತ್ತಾಯ

    ಹಿರಿಯೂರು: ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕುಂಚಿಟಿಗ ಒಬಿಸಿ ಮೀಸಲು ಜಾಗೃತಿ ಜಾಥಾಕ್ಕೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದ್ದು, ಕುಲಶಾಸ್ತ್ರ ಅಧ್ಯಯನ ವರದಿ ಯಥಾವತ್ ಜಾರಿ ಮಾಡಬೇಕೆಂದು ರೈತ ಮುಖಂಡ ಕಸವನಹಳ್ಳಿ ರಮೇಶ್ ಒತ್ತಾಯಿಸಿದರು.

    ತಾಲೂಕಿನ ಹೊಸ ಕಾತ್ರಿಕೇನಹಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಒಬಿಸಿ ಮೀಸಲು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರದ ಮೀಸಲು ಪಟ್ಟಿಯಲ್ಲಿ ಪ್ರವರ್ಗ 3ಎ ನಲ್ಲಿ ಬರುವ ಎಲ್ಲ ಜಾತಿಗಳಿಗೆ ಕೇಂದ್ರ ಒಬಿಸಿ ಸೌಲಭ್ಯ ಕಲ್ಪಿಸಿದೆ. ಆದರೆ, ಕುಂಚಿಟಿಗರನ್ನು ಕಡೆಗಣಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

    ಕೇಂದ್ರ ಸರ್ಕಾರದ ವಿವಿಧ ನೇಮಕಾತಿಯಲ್ಲಿ ಸಮುದಾಯದ ಪ್ರತಿಭಾವಂತರಿಗೆ ಸೌಲಭ್ಯ ಸಿಗುತ್ತಿಲ್ಲ. ಚುನಾವಣೆ ವೇಳೆ ಮೀಸಲು ಜಪ ಮಾಡಿ ಅಧಿಕಾರ ಪಡೆಯುವ ರಾಜಕಾರಣಿಗಳು ನಂತರ ಜಾಣಮೌನ ಪ್ರದರ್ಶಿಸುತ್ತಾರೆ. ಒಗ್ಗಟ್ಟಿನ ಕೊರತೆಯಿಂದ ಕುಂಚಿಟಿಗರಿಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಹಿನ್ನಡೆಯಾಗಿ ಅತಂತ್ರ ಸ್ಥಿತಿ ತಲುಪಿದ್ದಾರೆ ಎಂದು ತಿಳಿಸಿದರು.

    ಗ್ರಾಮಸ್ಥರಾದ ಎಸ್.ವಿ.ರಂಗನಾಥ್, ಮಂಜುನಾಥ್, ಶ್ರೀನಿವಾಸ್, ಶಶಿಕಲಾ, ತಿಮ್ಮಣ್ಣ, ನಿಜಲಿಂಗಪ್ಪ, ಗಂಗಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts