More

    ಸೆ. 14ರಂದು ಕುಂದಗೋಳ ಬಂದ್

    ಕುಂದಗೋಳ: ಮಳೆ ಕೊರತೆಯಿಂದ ಬೆಳೆಗಳು ಸಂಪೂರ್ಣ ನೆಲಕಚ್ಚಿವೆ. ಬರಗಾಲ ಘೋಷಣೆ ಜತೆಗೆ ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆ. 14ರಂದು ಕುಂದಗೋಳ ಪಟ್ಟಣ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿಕ ಸಮಾಜ ನವದೆಹಲಿ ರಾಜ್ಯಾಧ್ಯಕ್ಷ ಮಾಣಿಕ್ಯ ಚಿಲ್ಲೂರು ಹೇಳಿದರು.

    ಪಟ್ಟಣದ ಪಂಚಗೃಹ ಹಿರೇಮಠದ ಆವರಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೂ, ಬರ ಘೋಷಣೆಗೆ ವಿಳಂಬ ಮಾಡಲಾಗುತ್ತಿದೆ ಎಂದರು.

    ಸೆ. 14ರ ಬಂದ್‌ನಲ್ಲಿ ಪಟ್ಟಣದ ಶಿತಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶಿವಾನಂದ ಮಠದ ಮಹಾಂತ ಸ್ವಾಮೀಜಿ, ಕಲ್ಯಾಣಪೂರ ಮಠದ ಬಸವಣ್ಣಜ್ಜನವರು ಭಾಗವಹಿಸಿ ಬೆಂಬಲ ನೀಡಲಿದ್ದಾರೆ. ವಿವಿಧ ರೈತ, ಕನ್ನಡಪರ ಸಂಘಟನೆಗಳು, ಬೀದಿ ಬದಿ, ಹೋಟೆಲ್ ಉದ್ಯಮಿಗಳು, ವ್ಯಾಪಾರಸ್ಥರ ಸಂಘ, ತಾಲೂಕಿನ ರೈತರು ಬೆಂಬಲ ನೀಡಿದ್ದಾರೆ. 1000 ಹೆಚ್ಚು ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನಮ್ಮ ಮನವಿ ಪತ್ರ ಸ್ವೀಕರಿಸುವರಿಗೆ ಪ್ರತಿಭಟನೆ ನಡೆಯಲಿದೆ ಎಂದರು.

    ರತ್ನ ಭಾರತ ರೈತ ಸಂಘಟನೆ ರಾಜ್ಯ ಉಪಾಧ್ಯಕ್ಷ ಹೇಮನಗೌಡ ಬಸವನಗೌಡ್ರ, ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುನ್ನೂರ ಹಾಗೂ ರೈತ ಸಂಘದ ತಾಲೂಕು ಅಧ್ಯಕ್ಷ ಗುರುಪಾದಪ್ಪ ಬಂಕದ ಮಾತನಾಡಿ, ಬರಗಾಲ ಘೋಷಣೆ ಮಾಡಿ, ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂಪಾಯಿ ನೀಡಬೇಕು ಎಂದು ಹೇಳಿದರು.

    ಕರವೇ ಕಾರ್ಯದರ್ಶಿ ಮಂಜುನಾಥ ಹಾದಿಮನಿ, ರೈತ ಮುಖಂಡ ಬಸವರಾಜ ಯೋಗಪ್ಪನವರ, ರಾಜು ಕುಡವಕ್ಕಲ, ಸಲೀಂ ಕ್ಯಾಲಕೊಂಡ, ವೈ.ಎನ್. ಪಾಟೀಲ, ಶಂಕರಗೌಡ ನೀಲಗೌಡರ, ರೈತ ಮುಖಂಡರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts