

ವಿಜಯವಾಣಿ ಸುದ್ದಿಜಾಲ ಕುಂದಾಪುರ ಕುಂದಾಪ್ರ ಕನ್ನಡ ದಿನಾಚರಣೆ ಮೂಲಕ ಕುಂದಾಪ್ರ ಭಾಷೆ ಮಾತನಾಡುವವರ ಸಂಖ್ಯೆ ಹೆಚ್ಚಿದೆ. ಅಲ್ಲದೇ ವಿಶ್ವದೆಲ್ಲೆಡೆ ಕುಂದಾಪ್ರ ಭಾಷೆಯ ಮೇಲಿನ ಅಭಿಮಾನ ಜಾಸ್ತಿಯಾಗಿರುವುದೇ ಹೆಮ್ಮೆ ಎಂದು ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಹೇಳಿದರು. ಬೀಜಾಡಿ ಮಿತ್ರಸೌಧದಲ್ಲಿ ಗುರುವಾರ ಆಯೋಜಿಸಿದ್ದ ಆರನೇ ವರ್ಷದ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಮಾತನಾಡಿದರು. ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ವಕೀಲ ಪ್ರದೀಪ ಕುಮಾರ್ ಶೆಟ್ಟಿ ಮತ್ತು ರೋಟರಿ ಕ್ಲಬ್ ಕುಂದಾಪುರ ರಿವರ್ಸೈಡ್ ಅಧ್ಯಕ್ಷ ಯು.ಸದಾನಂದ ಉಡುಪ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರ ಬಿ.ಎನ್, ಬೀಜಾಡಿ ಗೋಪಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ್ ಮೊಗವೀರ, ರೋಟರಿ ಕ್ಲಬ್ ಕುಂದಾಪುರ ರಿವರ್ಸೈಡ್ ಕಾರ್ಯದರ್ಶಿ ಭಾಸ್ಕರ್ ಬಿ., ಬೀಜಾಡಿ-ಗೋಪಾಡಿ ರೋಟರಿ ಸಮುದಾಯ ದಳದ ಕಾರ್ಯದರ್ಶಿ ಗಜೇಂದ್ರ ಮೊಗವೀರ, ಕುಂದಾಪುರ ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷೆ ಸುಪ್ರೀತಾ ಪುರಾಣಿಕ ಉಪಸ್ಥಿತರಿದ್ದರು. ಅಚ್ಚುತ ಪೂಜಾರಿ, ಸುಮೇಧ್ ಪುರಾಣಿಕ ಕುಂದಾಪ್ರ ಕನ್ನಡ ಗೀತೆ ಹಾಡಿದರು. ಪಾಂಡುರಂಗ ಸ್ವಾಗತಿಸಿದರು. ಬಿ.ಜಿ.ನಾಗರಾಜ್ ವಂದಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಬೀಜಾಡಿ-ಗೋಪಾಡಿ ಮಿತ್ರ ಸಂಗಮ, ರೋಟರಿ ಕ್ಲಬ್ ಕುಂದಾಪುರ ರಿವರ್ಸೈಡ್, ಬೀಜಾಡಿ-ಗೋಪಾಡಿ ರೋಟರಿ ಸಮುದಾಯ ದಳ ಸಹಯೋಗ ವಹಿಸಿದ್ದವು.
ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಪ್ರಾಪ್ತಿ, ಅಕ್ಷರಾ, ಸ್ಪೂರ್ತಿ ಎಸ್, ಪ್ರಣತಿ ಉಪಾಧ್ಯ ಹಾಗೂ ಅಶಾ ಕಾರ್ಯಕರ್ತೆಯರಾದ ಸರೋಜಾ, ಅನಿತಾ, ಗೀತಾ, ಶ್ಯಾಮಲಾ ಅವರನ್ನು ಸನ್ಮಾನಿಸಲಾಯಿತು. ಬೀಜಾಡಿ ಮೂಡುಶಾಲಾ ಅಂಗನವಾಡಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.