ಕುಂದಾಪುರ ಎಕ್ಸಲೆಂಟ್ ಕಾಲೇಜು ಸಾಧನೆ

result
Published on

ಕುಂದಾಪುರ: ದ್ವಿತೀಯ ಪಿಯು ಫಲಿತಾಂಶದಲ್ಲಿ ಕುಂದಾಪುರದ ಎಕ್ಸಲೆಂಟ್ ಪ.ಪೂ. ಕಾಲೇಜಿಗೆ ರಾಜ್ಯಮಟ್ಟದಲ್ಲಿ 10 ಸ್ಥಾನಗಳು ಬಂದಿದ್ದು, ಅತಿ ಹೆಚ್ಚು ರ‌್ಯಾಂಕ್ ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 306 ವಿದ್ಯಾರ್ಥಿಗಳಲ್ಲಿ 180 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 119 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 86 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ರಾಜ್ಯಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಎಂ.ಎಂ.ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ, ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net