More

    ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..

    ಕುಂದಾಪುರ: ಈ ಬಾರಿಯ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ರಾಜ್ಯಕ್ಕೆ ಮೊದಲ ಪದಕ ಲಭಿಸಿದೆ. ಕುಂದಾಪುರದ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದಿದ್ದು, ಇದು ಭಾರತಕ್ಕೆ ಲಭಿಸಿದ ಎರಡನೇ ಪದಕ.


    ವೇಟ್‌ಲಿಫ್ಟಿಂಗ್ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿರುವ ಗುರುರಾಜ್ ಶನಿವಾರ ನಡೆದ ಪಂದ್ಯದಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದಕ್ಕೂ ಮೊದಲು ಭಾರತದ ಇನ್ನೋರ್ವ ಸ್ಪರ್ಧಿ ಸಂಕೇತ್ ಸಾಗರ್ 55 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಇದು ಈ ಬಾರಿಯ ಗೇಮ್ಸ್‌ನಲ್ಲಿ ಭಾರತಕ್ಕೆ ದಕ್ಕಿರುವ ಪ್ರಥಮ ಪದಕ.


    61 ಕೆ.ಜಿ. ವಿಭಾಗದಲ್ಲಿ ಮಲೇಷಿಯಾದ ಮಹಮ್ಮದ್ ಅಜ್ನಿಲ್ ಬಿಡಿನ್ ಚಿನ್ನದ ಪದಕ ಗೆದ್ದರೆ, ಪಪುವ ನ್ಯೂಗಿನಿ ದೇಶದ ಮೊರಿಯಾ ಬಾರು ಬೆಳ್ಳಿ ಪದಕ ಪಡೆದರು. ಮೂರನೇ ಸ್ಥಾನದಲ್ಲಿ ಗುರುರಾಜ್ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.


    ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ಟ್ಯಾಕ್ಸಿ ಚಾಲಕ ಮಹಾಬಲ ಪೂಜಾರಿ- ಪದ್ದು ಪೂಜಾರಿ ದಂಪತಿ ಪುತ್ರ ಗುರುರಾಜ್ ಕಳೆದ ಬಾರಿ ಆಸ್ಟ್ರೇಲಿಯಾ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 21ನೇ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿಪದಕ ಗೆದ್ದಿದ್ದರು. ಆಗ ಅವರು 56 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದರು. ಈ ಬಾರಿ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದಾರೆ. ವಾಯುಸೇನೆ ಉದ್ಯೋಗಿಯಾಗಿರುವ ಅವರು, ಎರಡನೇ ಬಾರಿಯ ಗೇಮ್ಸ್‌ಗೆ ಪಟಿಯಾಲದಲ್ಲಿ ಒಂದು ವರ್ಷದಿಂದ ಸಿದ್ಧತೆ ನಡೆಸಿದ್ದರು.

    ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts