

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವೃತ್ತಮಟ್ಟದ ಕಬಡ್ಡಿ ಪಂದ್ಯಾಟ ಗಂಗೊಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷ ಮೌಲಾನಾ ಅಬ್ದುಲ್ ಹಾದಿ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಹಕ್ಕುಗಳ ಸಾಮಾಜಿಕ ಕಾರ್ಯಕರ್ತೆ ತಿಲೋತ್ತಮ ನಾಯಕ್ ಪಂದ್ಯಾಟ ಉದ್ಘಾಟಿಸಿದರು. ಗಂಗೊಳ್ಳಿ ಕ್ಲಸ್ಟರ್ ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘ ಉಪಾಧ್ಯಕ್ಷ ಶಾಬುದ್ದೀನ್ ಅವೂಫ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮಹಮ್ಮದ್ ನೂರ್ ಫಾಜಿಲ್, ನಾಕುದಾ ಮೊಹಮ್ಮದ್ ಅಶ್ರಫ್, ಶಾಬುದ್ದೀನ್ ಮೊಹಮ್ಮದ್ ಮೀರಾನ್, ಗಂಗೊಳ್ಳಿ ಜಾಮೀಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕಿ ಹೇಮಾವತಿ ಸ್ವಾಗತಿಸಿದರು. ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಶಶಿಶಂಕರ ಎಚ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕಿ ಸುಮತಿ ವಂದಿಸಿದರು.