ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭ ಶಾಲೆಯ ವಠಾರದಲ್ಲಿ ಸೋಮವಾರ ಜರುಗಿತು.
ಶ್ರೀ ವೆಂಕಟರಮಣ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ದಂತ ವೈದ್ಯೆ ಡಾ.ಪ್ರೀತಿ ನಾವಡ ತಮ್ಮ ಮಕ್ಕಳ ಹಕ್ಕುಗಳ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ವೆಂಕಟರಮಣ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ್ ಗಾಣಿಗ, ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ವಾರ್ಷಿಕ ವರದಿ ವಾಚಿಸಿದರು.