More

    ಕುಂದಾಪುರ-ಹೊನ್ನಾವರ ಹೆದ್ದಾರಿ ಲೋಕಾರ್ಪಣೆ

    ಉಡುಪಿ: ಕುಂದಾಪುರ- ಗೋವಾ ಚತುಷ್ಪಥ 187 ಕಿ.ಮೀ.ರಸ್ತೆ ಯೋಜನೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಕುಂದಾಪುರ- ಹೊನ್ನಾವರ ಹೆದ್ದಾರಿಯನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ಲೋಕಾರ್ಪಣೆಗೊಳಿಸಿದರು.

    33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಡಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಾಯಿತು.
    ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಿರಿಯಡಕ ಪುತ್ತಿಗೆ ಸೇತುವೆ, ಶೃಂಗೇರಿ-ಕಾರ್ಕಳ ರಸ್ತೆಯ ನೆಮ್ಮಾರು ಸೇತುವೆ, ತೀರ್ಥಹಳ್ಳಿ-ಗಡಿಕಲ್ಲು ಸೇತುವೆ ಸೇರಿದಂತೆ ಒಟ್ಟು 8.20 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಗಡ್ಕರಿ ಶಿಲಾನ್ಯಾಸ ನೆರವೇರಿಸಿದರು.

    ಅಭಿವೃದ್ಧಿ ಕಾಮಗಾರಿಗಳಿಗೆ ಮುತುವರ್ಜಿ
    ಜಿಲ್ಲೆಯ ಹೆದ್ದಾರಿ ಅಭಿವೃದ್ಧಿ ಮತ್ತು ನಿರ್ವಹಣೆಗೆ ಸಂಬಂಧಿಸಿ ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡಲಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂಪೂರ್ಣ ಸಹಕಾರ ನೀಡುತ್ತಿದ್ದು, ಮಲ್ಪೆ-ತೀರ್ಥಹಳ್ಳಿ ಹೆದ್ದಾರಿ ಯೋಜನೆ ಹಂತಹಂತವಾಗಿ ವ್ಯವಸ್ಥಿತ ರೀತಿಯಲ್ಲಿ ನಡೆಯಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಪರ್ಕಳದಲ್ಲಿ ಭೂ ಸ್ವಾಧೀನಕ್ಕೆ ಸಂಬಂಧಿಸಿ ಸಮಸ್ಯೆ ಎದುರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನೂ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ. ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗೆ ಎರಡು ಹಂತಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಕುಂದಾಪುರ ಶಾಸ್ತ್ರಿ ಸರ್ಕಲ್ ಕಾಮಗಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದ್ದು, ಗುತ್ತಿಗೆ ಸಂಸ್ಥೆ ಪಲಾಯನ ಮಾಡುವ ಪರಿಸ್ಥಿತಿಗೆ ಬಂದಿತ್ತು. ಬಳಿಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುತ್ತಿಗೆದಾರರನ್ನು ಕರೆಸಿ ಹಣಕಾಸು ವ್ಯವಸ್ಥೆಗೆ ಮಾರ್ಗದರ್ಶನ ನೀಡಿ ಕಾಮಗಾರಿ ಬೇಗ ಮುಗಿಸಲು ಸೂಚನೆ ನೀಡಿದ್ದರು. ಬಳಿಕ ಕೋವಿಡ್‌ನಿಂದಾಗಿ ಮತ್ತಷ್ಟು ವಿಳಂಬವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಶಾಸಕ ಕೆ.ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts