More

    ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಕೇಂದ್ರಕ್ಕೆ ಶಿಪಾರಸ್ಸು, ಕೇಂದ್ರಕ್ಕೆಶಿಪಾರಸ್ಸು ಮಾಡಲು ಕಾರಣಿಕರ್ತರಾದ ಎಲ್ಲ ಸರ್ಕಾರಗಳಿಗೆ ಅಭಿನಂದನೆ : ರುದ್ರಣ್ಣ ಗುಳಗುಳಿ

    ಗದಗ: ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ  ರಾಜ್ಯ ಸರ್ಕಾರಗಳಿಗೆ ಅಭಿನಂದನೆ ಸಲ್ಲಿಸುವದರ ಜೊತೆಗೆ  ಕೇಂದ್ರ ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸಲಾಗುವುದು ಎಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಅವರು ಹೇಳಿದರು. 

     ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಸ್ವಾತಂತ್ರ್ಯ ಪೂರ್ವದಿಂದ ಹಾಗೂ ಇಂದಿನ ಎಸ್. ಟಿ. ಮೀಸಲಾತಿ ಪಟ್ಟಿಯಲ್ಲಿರುವ ಕುರುಬ ಸಮುದಾಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತಾರ ಮಾಡದೇ, ಆಗಿರುವ ಅನ್ಯಾಯವನ್ನು ಸರಿಪಡಿಸಲು, ಕಾಗಿನೆಲೆಯ ಜಗದ್ಗುರು ಪೂಜ್ಯಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಮಾರ್ಗದರ್ಶನದೊಂದಿಗೆ, ೨೦೧೫ರಿಂದ ನಿರಂತರವಾದ ಹೋರಾಟ, ಸಮಾವೇಶ, ಧರಣಿಗಳ ಮೂಲಕ ಅಂದಿನ ಕಾಂಗ್ರೇಸ್ ಸರ್ಕಾರಕ್ಕೆ ಮತ್ತು ಸಮ್ಮಿಶ್ರ ಸರ್ಕಾರಕ್ಕೆ ಮನವಿ ಮತ್ತು ಒತ್ತಾಯದಿಂದಾಗಿ ಸಮ್ಮಿಶ್ರ ಸರ್ಕಾರದಲ್ಲಿ ಕುರುಬರ ಎಸ್. ಟಿ. ಮೀಸಲಾತಿಗಾಗಿ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ ನೀಡಲಾಗಿತ್ತು. ೨೦೧೯ರಿಂದ ರಾಜ್ಯದ ೨೫ ಜಿಲ್ಲೆಗಳಲ್ಲಿ ನಡೆದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿಯವರು ದಿ. ೨೪-೦೩-೨೦೨೩ ರಂದು ನಡೆದ ಸಚಿವ ಸಂಪುಟದಲ್ಲಿ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರಿ ಆದೇಶ ಮಾಡಿದ್ದರು. ಆ ಆದೇಶವನ್ನು ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರಕಾರ ಇದೇ ಜು. ೨೦ ರಂದು ಇಂದಿನ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಸಮಸ್ತ ಹಾಲುಮತ ಸಮಾಜಕ್ಕೆ ಸಂತಸದ ದಿನವಾಗಿದೆ ಎಂದು ಹೇಳಿದರು. 

    ಮೂಲತಃ ಬುಡಕಟ್ಟು ಸಮುದಾಯವಾಗಿರುವ ಇಂದಿಗೂ ಸಹ ಬುಡಕಟ್ಟು ಸಂಸ್ಕೃತಿ, ಆಚರಣೆಗಳು ಹೊಂದಿರುವಂತಹ ಕುರುಬ ಸಮುದಾಯದ ಬೇಡಿಕೆಯನ್ನು ಪರಿಗಣಿಸಿ, ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು, ಸಹಕಾರ ನೀಡಿದ್ದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಹಾಗೂ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ  ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಶಿಫಾರಸ್ಸನ್ನು ಭಾರತ ಸರ್ಕಾರಕ್ಕೆ ಕಳುಹಿಸಿಕೊಟ್ಟಿರುವ ಮುಖ್ಯಮಂತ್ರಿ  ಸಿದ್ದರಾಮಯ್ಯನವರ ಸರ್ಕಾರಕ್ಕೂ ಸಮಾಜದ ಪರವಾಗಿ ಹಾಲುಮತ ಮಹಾಸಭಾ ಅಭಿನಂದನೆ  ಸಲ್ಲಿಸುತ್ತಿದೆ.

    ಅದೇರೀತಿ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರದ ಶಿಫಾರಸ್ಸನ್ನು ಅಂಗೀಕರಿಸಿ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕರಿಸಿ, ರಾಜ್ಯದ ಎಲ್ಲಾ ಕುರುಬರಿಗೆ ಎಸ್.ಟಿ, ಮೀಸಲಾತಿ ಪಟ್ಟಿಗೆ ಸೇರಿಸಿ, ಸಮುದಾಯಕ್ಕೆ ನ್ಯಾಯ ಒದಗಿಸಿಬೇಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ  ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಅವರು ಹಕ್ಕೊತ್ತಾಯ ಮಾಡಿದರು.

    ಈ ಸುದ್ದಿಗೋಷ್ಠಿಯಲ್ಲಿ  ಹಾಲುಮತ ಮಹಾಸಭಾದ ಪದಾಧಿಕಾರಿಗಳಾದ ನಾಗರಾಜ ಮೆಣಸಗಿ, ಸೋಮನಗೌಡ್ರ ಪಾಟೀಲ, ಮುತ್ತು ಜಡಿ, ಸತೀಶ ಗಿಡ್ಡಹನುಮಣ್ಣವರ, ಕುಮಾರ ಮಾರನಬಸರಿ, ಗಣೆಶ ಸತ್ಯಪ್ಪನವರ, ಮಲ್ಲೇಶ ವಗ್ಗನವರ,ಮಲ್ಲೇಶ ಬಿಂಗಿ,ಉಮೇಶ ಪೂಜಾರ, ರವಿ ಜೋಗಿನ, ಆನಂದ ಹಂಡಿ, ಬಸವರಾಜ ಪೂಜಾರ, ಸೋಮು ಮೇಟಿ, ಹನುಮಂತ ಕುರಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts