20.4 C
Bangalore
Monday, December 9, 2019

ಹೆಚ್ಚುವರಿ ಘಟಕ ಆರಂಭಕ್ಕೆ ವಿರೋಧ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

< ಕುಡತಿನಿ ನಾಗರಿಕ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ >

ಕುರುಗೋಡು: ಇಸಿಪಿಎಲ್ ಕಾರ್ಖಾನೆಯ ಹೆಚ್ಚುವರಿ ಘಟಕ ಆರಂಭಿಸುವ ಕ್ರಮ ವಿರೋಧಿಸಿ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಗೆ ಕುಡತಿನಿ ನಾಗರಿಕ ಹೋರಾಟ ಸಮಿತಿ ಸದಸ್ಯರು ಗುರುವಾರ ಮನವಿ ಸಲ್ಲಿಸಿದರು.

ಸಂಚಾಲಕ ವಕೀಲ ಟಿ.ಕೆ.ಕಾಮೇಶ ಮಾತನಾಡಿ, ಘಟಕ ಪ್ರಾರಂಭಿಸುವುದರಿಂದ ಜೀವ ಸಂಕುಲ ನಾಶವಾಗುತ್ತದೆ. ಅಂತರ್ಜಲ ಕುಸಿಯುವ ಜತೆಗೆ ಜನರ ಪ್ರಾಣಕ್ಕೂ ಸಂಚಕಾರ ಬರುತ್ತದೆ. ಜಿಲ್ಲಾಧಿಕಾರಿ ಜ.28ರಂದು ಕುಡತಿನಿ ಬಳಿಯ ಮುಸಿನಾಯಕನಹಳ್ಳಿಯಲ್ಲಿ ಎಪ್ಸಿಲಾನ್ ಕಾರ್ಬನ್ ಪ್ರೈ. ಕಂಪನಿ ಘಟಕ ಸ್ಥಾಪನೆ ಸಂಬಂಧ ಕರೆದಿರುವ ಸಭೆ ಕಾನೂನು ಬಾಹಿರವಾಗಿದೆ. ಸಭೆ ರದ್ದು ಮಾಡಬೇಕು. ಕಾರ್ಖಾನೆ ಹೆಚ್ಚುವರಿ ಘಟಕ ಆರಂಭಕ್ಕೆ ಪರಿಸರ ಇಲಾಖೆ ಪರವಾನಗಿ ನೀಡಬಾರದು ಎಂದು ಆಗ್ರಹಿಸಿದರು.

ಕೆ.ಫೋಲಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಳಸಂಚಿನಿಂದ ಡಾಂಬರ್ ಘಟಕ ಆರಂಭವಾಗಿದೆ. ಇದರ ವಿರುದ್ಧ ಹೋರಾಟ ನಡೆಸಿದರೂ ಸರ್ಕಾರ ಜನ ವಿರೋಧಿ ಧೋರಣೆ ಅನುಸರಿಸಿ ಘಟಕಕ್ಕೆ ಪರವಾನಗಿ ನೀಡಿದೆ. ಹೆಚ್ಚುವರಿ ಘಟಕ ಆರಂಭ ವಿರೋಧಿಸಿ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಹೇಳಿದರು.
ಸಿಐಟಿಯು ತಾಲೂಕು ಕಾರ್ಯದರ್ಶಿ ಎ.ಸ್ವಾಮಿ, ಭಗತ್‌ಸಿಂಗ್ ಯುವಕ ಸಂಘದ ಅಧ್ಯಕ್ಷ ಜಟಂಗಿ ಬಸವರಾಜ, ಜಂಗ್ಲಿಸಾಬ್, ಐ.ಲೋಕೇಶ, ಕಾಲೂಬಾ, ಯು.ತಿಪ್ಪೇಸ್ವಾಮಿ, ಲಕ್ಷ್ಮಣ, ಚಂದ್ರ, ತಿಮ್ಮಪ್ಪ, ಕೃಷ್ಣ, ವೆಂಕಟೇಶ, ಪಾಂಡುರಂಗ, ನಾಗದೇವ, ಗುಡ್ಡದ ಕಲ್ಲು ವೀರನಗೌಡ ಮತ್ತಿತರರಿದ್ದರು.

ಸಾರ್ವಜನಿಕರ ಆಕ್ಷೇಪಣೆ ಆಹ್ವಾನ
ಕುಡತಿನಿ ಸಮೀಪದ ಮುಸಿನಾಯಕನ ಹಳ್ಳಿಯ ಎಪ್ಸಿಲಾನ್ ಕಾರ್ಬನ್ ಪ್ರೈಲಿ. ಕಂಪನಿ ವಿವಿಧ ಘಟಕ ಆರಂಭಿಸಲು ಉದ್ದೇಶಸಿದ್ದು, ಈ ಕುರಿತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲಿದ್ದಲು ಡಾಂಬರ್ ಘಟಕವನ್ನು 3 ಲಕ್ಷ ಟಿಪಿಎಯಿಂದ 5 ಲಕ್ಷ ಟಿಪಿಎ ವರೆಗೆ ಹೆಚ್ಚಿಸುವ ಮತ್ತು ಹೊಸದಾಗಿ 3 ಲಕ್ಷ ಟಿಪಿಎ ಸಾಮರ್ಥ್ಯದ ಇಂಗಾಲದ ಕಪ್ಪು ಘಟಕ ಹಾಗೂ ಇತರ ಕೊಜೆನರೇಷನ್ ಘಟಕಗಳನ್ನು ಹಾಲಿ ಘಟಕದ ಪಕ್ಕದಲ್ಲೇ ಸ್ಥಾಪಿಸುವ ಸಂಬಂಧ ಕೇಂದ್ರ ಅರಣ್ಯ ಮತ್ತು ಪರಿಸರ ಮಂತ್ರಾಲಯದ ಹಳೇ ಕಾಯ್ದೆ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕರು ಜ.28ರಂದು ಯೋಜನಾ ಪ್ರದೇಶದ ಬಳಿ ಸಲಹೆ, ಸೂಚನೆ, ಆಕ್ಷೇಪಣೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...