ಖನಿಜ ನಿಧಿ ಹಂಚಿಕೆಯಲ್ಲಿ ಮಲತಾಯಿ ಧೋರಣೆ: ಸಚಿವ ಆನಂದ ಸಿಂಗ್ ವಿರುದ್ಧ ಸಂಡೂರು ಶಾಸಕ ಈ.ತುಕಾರಾಂ ಆರೋಪ

ಖನಿಜ ನಿಧಿ ಹಂಚಿಕೆಯಲ್ಲಿ ಮಲತಾಯಿ ಧೋರಣೆ: ಸಚಿವ ಆನಂದ ಸಿಂಗ್ ವಿರುದ್ಧ ಸಂಡೂರು ಶಾಸಕ ಈ.ತುಕಾರಾಂ ಆರೋಪ

ಕುರುಗೋಡು: ಸಚಿವ ಆನಂದ ಸಿಂಗ್, ಮೂರು ವರ್ಷಗಳ ಕಾಲ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದರೂ ಜಿಲ್ಲಾ ಖನಿಜ ನಿಧಿ ಹಂಚಿಕೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಮಲತಾಯಿ ಧೋರಣೆ ತೋರಿದ್ದಾರೆ ಎಂದು ಶಾಸಕ ಈ.ತುಕಾರಾಂ ಆರೋಪಿಸಿದರು.

ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ಶುಕ್ರವಾರ ನೂತನ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಖನಿಜ ನಿಧಿ ಹಂಚಿಕೆಯಲ್ಲಿ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಸಿಂಹ ಪಾಲನ್ನು (ಶೇ.33) ವಿಜಯನಗರ ಜಿಲ್ಲೆಗೆ ಕೊಂಡೊಯ್ದರು. ಬರೀ ಸುಳ್ಳು ಆರೋಪ ಮಾಡುತ್ತಿರುವ ಅವರು, ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎಂದು ಬಹಿರಂಗ ಪಡಿಸಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ಏಳುಬೆಂಚಿ ಗ್ರಾಮದಲ್ಲಿ ಆರು ಹಾಸಿಗೆ ಸರ್ಕಾರಿ ಆಸ್ಪತ್ರೆ ಮತ್ತು ರೈತರ ಅನುಕೂಲಕ್ಕಾಗಿ ಎಪಿಎಂಸಿ ಉಗ್ರಾಣ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಕರೆಯಲಾಗುವುದು. ಕುಡತಿನಿಯ ಬೈಪಾಸ್ ರಸ್ತೆಯನ್ನು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮವನ್ನು ಶೈಕ್ಷಣಿಕ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಜಿಲ್ಲಾ ಖನಿಜ ನಿಧಿಯಲ್ಲಿ ವಿಜಯನಗರ ಜಿಲ್ಲೆಯು ಮಾರ್ಗಸೂಚಿ ಪ್ರಕಾರ ಶೇ.12ರಷ್ಟು ಮಾತ್ರ ಅನುದಾನ ಬಳಿಸಿಕೊಳ್ಳಬೇಕಾಗಿತ್ತು ಆದರೆ, ಶೇ.28ರಷ್ಟು ಬಳಿಸಿಕೊಂಡಿರುವುದು ಎಷ್ಟು ಸರಿ?. ಬಿಜೆಪಿ ಸರ್ಕಾರಕ್ಕೆ ಸಂಡೂರು ಕ್ಷೇತ್ರದ ಜನರ ಬಗ್ಗೆ ಕಳಕಳಿ ಇದ್ದರೇ ಅನುದಾನ ವಾಪಾಸ್ ನೀಡಲಿ. ಕಳೆದ ವರ್ಷ ಸಚಿವ ಆನಂದ ಸಿಂಗ್ ನೇತೃತ್ವದಲ್ಲಿ ಬಳ್ಳಾರಿಯ ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲಾ ಖನಿಜ ನಿಧಿ ಹಂಚಿಕೆ ಮಾಡುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದಾಗ ನಾನು ಪ್ರಶ್ನಿಸಿ, ಸಭೆಯಿಂದ ಹೊರ ನಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದೆ ಎಂದು ತಿಳಿಸಿದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ 15 ರಿಂದ 20 ಸಾವಿರ ಜನಸಂಖ್ಯೆ ಇತ್ತು. ಅಮಿತ್ ಷಾ ಅವರು ಆತುರದಲ್ಲಿ ಸಭೆಗೆ ಬಂದು ನಿರ್ಗಮಿಸಿದರು. ಜನರು ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿರುವುದು ಎದ್ದು ಕಾಣುತ್ತಿದೆ ಎಂದರು.ಗ್ರಾಪಂ ಅಧ್ಯಕ್ಷೆ ಡಿ.ರೇಣುಕಮ್ಮ ಹೇಮಚಂದ್ರದಾಸ್, ಕುಡುತಿನಿ ಪಪಂ ಅಧ್ಯಕ್ಷ ಮಂಜುನಾಥ, ಮುಖಂಡರಾದ ಅಮರೇಶ್ ಶಾಸ್ತ್ರಿ, ಗಂಗಣ್ಣ, ಹನುಮಂತಪ್ಪ, ಪಲ್ಲೇದ ಪ್ರಭುಗೌಡ ದೊಡ್ಡಪ್ಪ, ಸತ್ಯಪ್ಪ ಇತರರಿದ್ದರು

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…