More

    ಸಮಾಜದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ, ವಾಲ್ಮೀಕಿ ಸಂಘದ ಅಧ್ಯಕ್ಷ ಎನ್.ಶಿವಕುಮಾರ್ ಹೇಳಿಕೆ

    ಕುರುಗೋಡು: ತಾಲೂಕು ಆಡಳಿತದಿಂದ ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸೋಮವಾರ ಕರೆದಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ವಾಲ್ಮೀಕಿ ಸಮಾಜದ ಮುಖಂಡರು ಬಹಿಷ್ಕರಿಸಿ ಹೊರನಡೆದರು. ಸಭೆಯಿಂದ ಹೊರಬಂದ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ಧೋರಣೆಯ ವಿರುದ್ಧ ಘೋಷಣೆ ಕೂಗಿದರು.

    ವಾಲ್ಮೀಕಿ ಸಂಘದ ಅಧ್ಯಕ್ಷ ಎನ್.ಶಿವಕುಮಾರ್ ಮಾತನಾಡಿ, 7.5 ಮೀಸಲಾತಿ ಹೆಚ್ಚಳಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಜಧಾನಿಯಲ್ಲಿ 229 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಬೆಲೆ ಕೊಡದ ಸರ್ಕಾರ ವಾಲ್ಮೀಕಿ ಜಯಂತಿ ಆಚರಣೆಗೆ ಮುಂದಾಗಿರುವುದು ಎಷ್ಟರ ಮಟ್ಟಿಗೆ ಸರಿ. ಸರ್ಕಾರ ವಾಲ್ಮೀಕಿ ಸಮಾಜವನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ. ಇದು ಸರಿಯಾದ ಕ್ರಮವಲ್ಲ. ಜಯಂತಿ ಒಳಗಾಗಿ ಮೀಸಲಾತಿ ಹೆಚ್ಚಳ ಕುರಿತು ನಿರ್ಧಾರ ಕೈಗೊಳ್ಳದಿದ್ದರೆ ಸಮಾಜದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ದೇವಸ್ಥಾನದಲ್ಲಿಯೇ ಸರಳವಾಗಿ ಜಯಂತಿ ಆಚರಿಸಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಸರ್ಕಾರದಿಂದ ಆಚರಿಸುವ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸುವುದಿಲ್ಲ ಎಂದರು.

    ಮುಖಂಡರಾದ ಕೊಮಾರೆಪ್ಪ, ಎನ್.ಸೀನಪ್ಪ, ವೆಂಕಟೇಶಪ್ಪ, ಎನ್.ನಾಗರಾಜ, ಎಂ.ಬಸವರಾಜ, ಹಂಪಿ ಬಸವರಾಜ, ರಾಮಣ್ಣ, ಅಂದ್ರಾಳ್ ಮಲ್ಲಿಕಾರ್ಜುನ, ಗುಡಿಸಲಿ ರಾಜಣ್ಣ, ಜಡೇಪ್ಪ, ಮಾರೆಪ್ಪ, ತಿಪ್ಪೇಶ್, ಬಸವರಾಜ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts