More

    ಸರಿಯಾದ ಸಮಯಕ್ಕೆ ಬಸ್ ಓಡಿಸಿ

    ಕುರುಗೋಡು: ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಬಾದನಹಟ್ಟಿ ಗ್ರಾಮದಲ್ಲಿ ಸೋಮವಾರ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.

    ಬಾದನಹಟ್ಟಿ ಗ್ರಾಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬಳ್ಳಾರಿಗೆ ಹೋಗುತ್ತಾರೆ. ಆದರೆ, ಬಸ್‌ಗಳು ತಡವಾಗಿ ಬರುತ್ತಿರುವುದರಿಂದ 3 ಕಿಮೀ ದೂರದ ಕುರುಗೋಡಿಗೆ ಕಾಲ್ನಡಿಯಲ್ಲಿ ತೆರಳಿ ಅಲ್ಲಿಂದ ಬಸ್‌ನಲ್ಲಿ ಬಳ್ಳಾರಿಗೆ ಹೋಗಬೇಕಾಗಿದೆ. ಇದರಿಂದ ಕಾಲೇಜು ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ತಡವಾಗಿ ಹೋಗುವುದರಿಂದ ಉಪನ್ಯಾಸಕರು ಹೊರಗೆ ನಿಲ್ಲಿಸುತ್ತಿದ್ದಾರೆ.

    ಆದ್ದರಿಂದ ಬೆಳಿಗ್ಗೆ 7.45ಕ್ಕೆ ಬಸ್ ಡಿಪೋದಿಂದ ಬಿಟ್ಟು 8 ಕ್ಕೆ ಬಾದನಹಟ್ಟಿ ಗ್ರಾಮಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಕೃಷ್ಣನಗರ ಕ್ಯಾಂಪ್, ಸಿದ್ದಮ್ಮನಹಳ್ಳಿ, ಕುಡತಿನಿ ಮಾರ್ಗಕ್ಕೆ ಬಸ್ ಸೌಕರ್ಯ ಒದಗಿಸಬೇಕು. ಈ ಬಗ್ಗೆ ಸಾರಿಗೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಸ್ಥಳಕ್ಕೆ ಆಗಮಿಸಿದ ಸಾರಿಗೆ ಘಟಕದ ವ್ಯವಸ್ಥಾಪಕ ಹರಿಕೃಷ್ಣ ಮಾತನಾಡಿ, ಡಿಪೋದಲ್ಲಿ ಬಸ್‌ಗಳು ಮತ್ತು ಸಿಬ್ಬಂದಿ ಕೊರತೆಯಿಂದ ಸಮಸ್ಯೆಯಾಗಿದೆ. ಇನ್ಮುಂದೆ ಸರಿಯಾದ ಸಮಯಕ್ಕೆ ಬಸ್ ಬಿಡಲಾಗುವುದು ಎಂದು ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ವಿದ್ಯಾರ್ಥಿಗಳಾದ ಶಂಕರಗೌಡ, ಶಿವರಾಜ್, ಬಸವರಾಜ್, ಅಂಜಿನಿ, ನಂದಿನಿ, ಸಂದೀಪ್, ಗಣೇಶ್, ಸುರೇಶ, ಸೋಮಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts