More

    ಆರೋಗ್ಯವಾಗಿದ್ದರೆ ಗುರಿ ತಲುಪಲು ಸಾಧ್ಯ

    ಕುರುಗೋಡು: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.

    ಶ್ರೀಧರಗಡ್ಡೆ ಗ್ರಾಪಂ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ನರೇಗಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೂಲಿ ಕಾರ್ಮಿಕರು ಆರೋಗ್ಯವಾಗಿದ್ದರೆ ನರೇಗಾ ಯೋಜನೆಯಲ್ಲಿ ಹೆಚ್ಚಿನ ಮಾನವ ದಿನಗಳ ಸೃಜನೆಯ ಗುರಿ ತಲುಪಲು ಸಾಧ್ಯ. ಕೂಲಿ ಹೆಚ್ಚಿಸಬೇಕೆಂಬುದು ಕಾರ್ಮಿಕರ ಬೇಡಿಕೆಯಾಗಿದೆ. ಅದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

    ಪಿಡಿಒ ಕೆ.ಪ್ರಾಣೇಶ್ ಮಾತನಾಡಿ, ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಲು, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನರೇಗಾ ಯೋಜನೆ ಜಾರಿಗೆ ತರಲಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ನಂತರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವೀಕ್ಷಿಸಿದರು. ಅಂಗವಿಕಲರು ಮತ್ತು ಕಾರ್ಮಿಕರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts