More

    ಎಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಜೀವಿಸಲು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಎಸ್.ಹೊನ್ನಸ್ವಾಮಿ ಕಿವಿಮಾತು

    ಕುಷ್ಟಗಿ: ಸಾಮಾಜಿಕ ಅಸಮಾನತೆಯಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಜೆಎಂಎಫ್‌ಸಿ ಕೋರ್ಟ್‌ನ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಎಸ್.ಹೊನ್ನಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣದ ಮಾತೋಶ್ರೀ ಹೊಳಿಯಮ್ಮ ಮಹಿಳಾ ಕಲಾ ಮಹಾವಿದ್ಯಾಲಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನದ ನಿಮಿತ್ತ ಬುಧವಾರ ಆಯೋಜಿಸಿದ್ದ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಿಂಗ ತಾರತಮ್ಯದ ಜತೆಗೆ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡುವುದರಿಂದ ಸಾಮಾಜಿಕ ಅಸಮಾನತೆ ಹೆಚ್ಚುತ್ತಿದೆ. ಎಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಜೀವಿಸುವ ಅಗತ್ಯವಿದೆ ಎಂದರು.

    ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ತಳವಾರ್ ಮಾತನಾಡಿ, ಪ್ರಭಾವಿಗಳ ಕಾರಣದಿಂದ ಸಾಮಾಜಿಕ ನ್ಯಾಯ ಪದಕ್ಕೆ ಅರ್ಥ ಇಲ್ಲದಂತಾಗಿದೆ. ಕಲಿತ ವಿದ್ಯೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂಸ್ಕಾರಯುತ ಜೀವನ ನಡೆಸಬೇಕಿದೆ. ಆ ಮೂಲಕ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗುವಂತಾಗಬೇಕಿದೆ ಎಂದರು.

    ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಿ.ಸತೀಶ್ ಮಾತನಾಡಿ, ಎಲ್ಲರೂ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಜೀವನ ನಡೆಸಬೇಕಿದೆ. ಸಾಮಾಜಿಕ ನ್ಯಾಯದ ಅರಿವನ್ನು ಪ್ರತಿಯೊಬ್ಬರೂ ಹೊಂದಬೇಕಿದೆ ಎಂದರು. ವಕೀಲರ ಸಂಘದ ಉಪಾಧ್ಯಕ್ಷ ಸಿ.ಎನ್.ಉಪ್ಪಿನ್ ಮಾತನಾಡಿ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಒಂದೇ ತಕ್ಕಡಿಯಲ್ಲಿ ತೂಗುವ ಕಾರ್ಯ ಮಾಡಬೇಕಿದೆ ಎಂದರು.

    ಸಂಸ್ಥೆಯ ಕಾರ್ಯದರ್ಶಿ ಸುಂದರ್ ಕುಮಾರ್ ಚೌಡ್ಕಿ, ಉಪನ್ಯಾಸಕರಾದ ಬಸವರಾಜ ಪೂಜಾರ್, ಸಂಗಮೇಶ ಬಿಳಿಯಪ್ಪನವರ್, ಟಿ.ಗೀತಾ ಕೋರ್ಟ್ ಸಿಬ್ಬಂದಿ ಸುನಿಲ್ ಮಠ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts