More

    ಹಕ್ಕುಗಳ ಜತೆ ಕರ್ತವ್ಯ ಪಾಲನೆಯಾಗಲಿ ಎಂದು ಸಲಹೆ ನೀಡಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್ ಕಿವಿಮಾತು

    ಕುಷ್ಟಗಿ: ಹಕ್ಕುಗಳ ಜತೆ ಕರ್ತವ್ಯ ಪಾಲನೆಯೂ ಆಗಬೇಕಿದೆ ಎಂದು ಪಟ್ಟಣದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್ ಕಿವಿಮಾತು ಹೇಳಿದರು.

    ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟೀಯ ಯುವ ದಿನಾಚರಣೆ ಹಾಗೂ ಸಂವಿಧಾನದ ಮೂಲಭೂತ ಕರ್ತವ್ಯಗಳ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯಾಲಯಗಳ ಮೊರೆ ಹೋಗುವ ನಾಗರಿಕರು ದೇಶದ ಪ್ರಜೆಯಾಗಿ ಕರ್ತವ್ಯ ಪಾಲನೆ ಮಾಡುವ ಮೂಲಕ ಸಂವಿಧಾನದ ಆಶಯವನ್ನೂ ಈಡೇರಿಸಬೇಕಿದೆ ಎಂದರು.

    ಮೂಲಭೂತ ಕರ್ತವ್ಯಗಳ ಕುರಿತು ವಕೀಲ ಪರಸಪ್ಪ ಗುಜಮಾಗಡಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಎಚ್.ಜಿ.ನೀರಗೇರಿ, ವಕೀಲರ ಸಂಘದ ಅಧ್ಯಕ್ಷ ಹೊಳಿಯಪ್ಪ ಕುರಿ, ಬಿಆರ್‌ಸಿ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ಶಿಕ್ಷಣ ಸಂಯೋಜಕರಾದ ಸೋಮನಗೌಡ ಪಾಟೀಲ್, ದಾಕ್ಷಾಯಿಣಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts