More

    ಮೀಸಲು ಪಡೆಯಿಂದ ಪಥ ಸಂಚಲನ

    ಕುಷ್ಟಗಿ: ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ತಹಸೀಲ್ದಾರ್ ರವಿ ಅಂಗಡಿ ಹೇಳಿದರು.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಯಿಂದ ಶುಕ್ರವಾರ ನಡೆದ ಪಥ ಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದರು.

    ಮತಗಟ್ಟೆ ಬಳಿ ಮತದಾರರಿಗೆ ಆಮಿಷ ಒಡ್ಡುವುದಾಗಲಿ, ಮತ ಹಾಕದಂತೆ ಒತ್ತಡ ಹೇರುವುದಾಗಲಿ ಮಾಡುವಂತಿಲ್ಲ. ಚುನಾವಣೆ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸುವುದು ಕಂಡುಬಂದಲ್ಲಿ ಕೂಡಲೇ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ತಾಪಂ ಇಒ ನಿಂಗಪ್ಪ ಮಸಳಿ, ಗ್ರೇಡ್ 2 ತಹಸೀಲ್ದಾರ್ ಮುರುಳೀಧರ ಮುಕ್ತೇದಾರ, ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್‌ಐ ಮುದ್ದುರಂಗಸ್ವಾಮಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts