More

    ಯಾವುದೇ ಒತ್ತಡಕ್ಕೆ ಮಣಿಯದೆ ಕಾರ್ಯನಿರ್ವಹಿಸಿ: ತಹಸೀಲ್ದಾರ್ ರಾಘವೇಂದ್ರರಾವ್ ಸೂಚನೆ

    ಕುಷ್ಟಗಿ: ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು ಎಂದು ತಹಸೀಲ್ದಾರ್ ರಾಘವೇಂದ್ರರಾವ್ ಹೇಳಿದರು.

    ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳ ತಂಡ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ನಿಯೋಜನೆಗೊಂಡಿರುವ ಅಧಿಕಾರಿಗಳು ದಿನದ 24 ತಾಸು ಕಾರ್ಯನಿರ್ವಹಿಸಲು ಸಿದ್ಧರಾಗಬೇಕು. ಮಾದರಿ ನೀತಿ ಸಂಹಿತೆ ಮಾರ್ಗಸೂಚಿಗಳನ್ನು ಸರಿಯಾಗಿ ಅರ್ಥೈಸಿಕೊಂಡು ಅನುಷ್ಠಾನಗೊಳಿಸಬೇಕು. ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಚೆಕ್‌ಪೋಸ್ಟ್ ಸ್ಥಾಪಿಸಲಾಗುತ್ತಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ವಾಹನಗಳ ತಪಾಸಣೆ ಕೈಗೊಳ್ಳಬೇಕು ಎಂದರು.

    ಉಪ ತಹಸೀಲ್ದಾರ್ ವಿಜಯಕುಮಾರ ಗುಂಡೂರು, ಸ್ವೀಪ್ ಸಮಿತಿ ಅಧ್ಯಕ್ಷ ತಾಪಂ ಇಒ ಶಿವಪ್ಪ ಸುಬೇದಾರ್, ಚುನಾವಣೆ ವಿಭಾಗದ ಸಿಬ್ಬಂದಿ ಅಜಿತ್, ಸುಂದರರಾಜ್, ಶರಣಪ್ಪ ಹುಡೇದ್, ಸ್ವೀಪ್ ತಂಡದ ಸದಸ್ಯರಾದ ದೇವರಾಜ ಪತ್ತಾರ್, ಸಂಗಪ್ಪ ನಂದಾಪುರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts