More

    ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ, ತಹಸೀಲ್ದಾರ್ ಗುರುರಾಜ ಛಲವಾದಿ ಮನವಿ

    ಕುಷ್ಟಗಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ತಹಸೀಲ್ದಾರ್ ಗುರುರಾಜ ಛಲವಾದಿ ಹೇಳಿದರು. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಬುಧವಾರ ಪಟ್ಟಣದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

    18ವರ್ಷ ಮೇಲ್ಪಟ್ಟ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕು. ಮರಣ ಹೊಂದಿರುವ ಮತದಾರರ ಹೆಸರನ್ನು ಪಟ್ಟಿಯಿಂದ ತಗೆದು ಹಾಕುವುದು, ಹೆಸರು ತಿದ್ದುಪಡಿ ಇತ್ಯಾದಿ ಮಾಡಲಾಗುವುದು ಎಂದು ತಿಳಿಸಿದರು.

    ತಾಪಂ ಇಒ ಶಿವಪ್ಪ ಸುಬೇದಾರ್ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋದಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಸಲ್ಲಿಸಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು ಎಂದರು.

    ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸ್ ಪಾಟೀಲ್, ತಾಪಂ ಸಹಾಯಕ ಲೆಕ್ಕಾಧಿಕಾರಿ ರುದ್ರಪ್ಪ ಅಕ್ಕಿ, ಸಂಜೀವಿನಿ ಯೋಜನೆಯ ಕಾರ್ಯಕ್ರಮ ವ್ಯವಸ್ಥಾಪಕ ಸಂಗಣ್ಣ ಸಂಗಾಪುರ, ಮೇಲ್ವಿಚಾರಕರಾದ ಮಾದೇಗೌಡ ಪೊಲೀಸ್ ಪಾಟೀಲ್, ರಾಜು ಭಜಂತ್ರಿ ಸೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರು ಇದ್ದರು.

    ಸುಸ್ತಾದ ವಿದ್ಯಾರ್ಥಿಗಳು!: ಪಟ್ಟಣದ ಕೊಪ್ಪಳ ರಸ್ತೆಯ ಮಲ್ಲಯ್ಯ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ತಾಲೂಕು ಕ್ರೀಡಾಂಗಣ ವರೆಗೆ ಜಾಗೃತಿ ಜಾಥಾ ನಡೆಯಿತು. ಸುಮಾರು 1ಕಿಮೀ ವರೆಗೆ ತೆರಳಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸುಸ್ತಾದವರಂತೆ ಕಂಡುಬಂದರು. ವಿದ್ಯಾರ್ಥಿಗಳಿಗೆ ಕನಿಷ್ಠ ಕುಡಿವ ನೀರಿನ ವ್ಯವಸ್ಥೆಯನ್ನೂ ಮಾಡಿರಲಿಲ್ಲ. ಜಾಥಾ ನಂತರ ಕುಡಿವ ನೀರಿಗಾಗಿ ಅಲೆದಾಡುವಂತಾಯಿತು. ಇತ್ತೀಚೆಗೆ ಕೋಟಿ ಕಂಠ ಗಾಯನ ಕಾರ್ಯಕ್ರಮ ವೇಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರೊಬ್ಬರು ಸುಮಾರು ಹೊತ್ತು ನಿಂತಲ್ಲಿಯೇ ನಿಂತು ಅಸ್ವಸ್ಥಗೊಂಡು ನೆಲಕ್ಕೆ ಬಿದ್ದಿದ್ದರು. ಇಷ್ಟಾದರೂ ಇಂಥ ಕಾರ್ಯಕ್ರಮಗಳಲ್ಲಿ ನೀರು, ನೆರಳಿನ ವ್ಯವಸ್ಥೆ ಮಾಡದಿರುವುದು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವವರಲ್ಲಿ ಅಸಮಧಾನವನ್ನುಂಟು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts