More

    ಮಕ್ಕಳ ಪ್ರತಿಭೆ ಅನಾವರಣಕ್ಕೆ ಶ್ರಮಿಸಿ

    ಕುಷ್ಟಗಿ: ಪಠ್ಯದ ಜತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ಪಾಲ್ಗೊಂಡು ಕ್ರಿಯಾಶೀಲರಾಗಿ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ವಿದ್ಯಾರ್ಥಿಗಳಿಗೆ ಹೇಳಿದರು.

    ಪಟ್ಟಣದ ಬಾಲಕಿಯರ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಗಳಾಗಿವೆ. ಕೇವಲ ಸ್ಪರ್ಧೆಗಳನ್ನು ದೃಷ್ಟಿಯಲ್ಲಿಟ್ಟುಕೊಳ್ಳದೆ ನಿತ್ಯ ತರಗತಿಗಳಲ್ಲಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತರುವ ಕಾರ್ಯವನ್ನು ಶಿಕ್ಷಕರು ಮಾಡಬೇಕಿದೆ ಎಂದರು.

    ಕಾರ್ಯಕ್ರಮದ ನೋಡಲ್ ಅಧಿಕಾರಿ ದಾವಲ್‌ಸಾಬ್ ವಾಲಿಕಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ನೀಲನಗೌಡ ಹೊಸಗೌಡ್ರ ಮಾತನಾಡಿದರು.

    ತಾಪಂ ಇಒ ನಿಂಗಪ್ಪ ಮಸಳಿ, ಪುರಸಭೆ ಸದಸ್ಯರಾದ ಮಹಾಂತೇಶ ಕಲಬಾವಿ, ವಸಂತ ಮೇಲಿನಮನಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದರಿ, ಬಿಇಒ ಸುರೇಂದ್ರ ಕಾಂಬಳೆ, ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರ್, ಶಾಲೆಯ ಮುಖ್ಯಶಿಕ್ಷಕ ಸಿದ್ರಾಮಪ್ಪ ಅಮರಾವತಿ ಹಾಗೂ ಪಟ್ಟಣದ ವಿವಿಧ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು, ಮುಖ್ಯ ಶಿಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts