More

    ಅರ್ಹರಿಗೆ ಸಿಗಲಿ ಸರ್ಕಾರದ ಯೋಜನೆಗಳು: ನ್ಯಾಯಾಧೀಶ ಶಂಭುಲಿಂಗಯ್ಯ ಮೂಡಿಮಠ ಕಿವಿಮಾತು

    ಕುಷ್ಟಗಿ: ಜನರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆ ಜಾರಿಗೊಳಿಸಿ ಅನುಷ್ಠಾನ ಮಾಡುತ್ತದೆ. ಅವುಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಶಂಭುಲಿಂಗಯ್ಯ ಮೂಡಿಮಠ ಹೇಳಿದರು.

    ಪಟ್ಟಣದ ತಹಸಿಲ್ ಕಚೇರಿಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕಂದಾಯ ಇಲಾಖೆಯ ಸಹಯೋಗದೊಂದಿಗೆ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನರ್ಹರೂ ನಕಲಿ ದಾಖಲೆ ಸಲ್ಲಿಸಿ ಯೋಜನೆಯ ಲಾಭ ಪಡೆಯುತ್ತಿರುವ ಉದಾಹರಣೆಗಳಿವೆ. ಅರ್ಹರಿಗೆ ಯೋಜನೆ ತಲುಪಲು ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಅಗತ್ಯ ದಾಖಲೆ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆಯಬೇಕು. ಅಧಿಕಾರಿಗಳು ವಿಳಂಬ ಅಥವಾ ನಿರಾಕರಿಸಿದರೆ ಮೇಲಧಿಕಾರಿಗಳ ಗಮನಕ್ಕೆ ತರುವ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.

    ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾತನಾಡಿ, ಸರ್ಕಾರ ಯಾವುದೇ ಯೋಜನೆ ಜಾರಿಗೊಳಿಸಿದರೂ ಅದರ ಹಿಂದೆ ಜನರ ಕಲ್ಯಾಣದ ಉದ್ದೇಶವಿರುತ್ತದೆ. ಯೋಜನೆಗಳ ಸದುಪಯೋಗ ಪಡೆದು ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಬೇಕಿದೆ ಎಂದರು.

    ತಹಸೀಲ್ದಾರ್ ಗುರುರಾಜ ಛಲವಾದಿ ಮಾತನಾಡಿ, ಕಂದಾಯ ಇಲಾಖೆ ವಿವಿಧ ಮಾಸಾಶನ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಅರ್ಹ ಫಲಾನುಭವಿಗಳು ಮಧ್ಯವರ್ತಿಗಳ ಮೊರೆ ಹೋಗದೆ ನೇರ ಅರ್ಜಿ ಸಲ್ಲಿಸಿ ಸದುಪಯೋಗ ಪಡೆಯಬೇಕಿದೆ ಎಂದರು. ಬಿಆರ್‌ಪಿ ಶರಣಪ್ಪ ತೆಮ್ಮಿನಾಳ ಮಾತನಾಡಿದರು. ಗ್ರೇಡ್ 2 ತಹಸೀಲ್ದಾರ್ ಮುರಳೀಧರ, ಸರ್ಕಾರಿ ಸಹಾಯಕ ಅಭಿಯೋಜಕ ಎಲ್.ರಾಯನಗೌಡ , ಬಿಆರ್‌ಪಿ ಜೀವನಸಾಬ್ ಬಿನ್ನಾಳ, ಕಂದಾಯ ನಿರೀಕ್ಷಕ ಶರಣಯ್ಯ ನಿಡಗುಂದಿಮಠ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts