More

    ಚುರುಕು ಪಡೆದ ಮುಂಗಾರು ಬಿತ್ತನೆ

    ಕುಷ್ಟಗಿ: ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಚುರುಕುಗೊಂಡಿದೆ.

    ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಎಳ್ಳು ಬಿತ್ತನೆ ನಡೆದಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಖರೀದಿಗೆ ರೈತರು ಮುಗಿಬಿದ್ದಿದ್ದಾರೆ. ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ವಾಹನ ವ್ಯವಸ್ಥೆ ಇಲ್ಲದೆ ಬಿತ್ತನೆ ಬೀಜ ಹಾಗೂ ಗೊಬ್ಬರ ಸಾಗಣೆಗೆ ರೈತರು ಪರದಾಡುತ್ತಿದ್ದಾರೆ. ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ 120 ಕ್ವಿಂಟಾಲ್ ಮೆಕ್ಕೆಜೋಳ, 85 ಕ್ವಿಂ. ಸಜ್ಜೆ, 28 ಕ್ವಿಂ. ಸೂರ್ಯಕಾಂತಿ, 105 ಕ್ವಿಂ. ಹೆಸರು ಹಾಗೂ 80 ಕ್ವಿಂ. ತೊಗರಿ ಬಿತ್ತನೆ ಬೀಜದ ದಾಸ್ತಾನು ಇದೆ ಎಂದು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ನಾಗನಗೌಡ ಪಾಟೀಲ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts